ಬೆಂಗಳೂರು:ಲೈಟ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ತಡರಾತ್ರಿ ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯ ದೇವಿನಗರದ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ರಾತ್ರಿ 1 ಗಂಟೆ ಸುಮಾರಿಗೆ ಬಿಇಎಲ್ ಮಾರ್ಗದಿಂದ ಹೆಬ್ಬಾಳದ ಕಡೆಗೆ ಬರುತ್ತಿದ್ದ ಯುವಕರ ಸ್ಕೂಟರ್, ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಹೆಬ್ಬಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಓರ್ವನ ಸೊಂಟದಲ್ಲಿ ಚಾಕು ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು, ಮೃತರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಇದನ್ನೂ ಓದಿ:ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನ ಲಾಡ್ಜ್ನಲ್ಲಿ ಸಾವು