ಕರ್ನಾಟಕ

karnataka

ETV Bharat / state

ಕಾರು ಮತ್ತು ಆಟೋ ನಡುವೆ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ - ROAD ACCIDENT

ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಸಾಗರದಲ್ಲಿ ನಡೆದಿದೆ.

ಆಟೋ ಮತ್ತು ಕಾರಿನ ನಡುವೆ ಅಪಘಾತ
ಆಟೋ ಮತ್ತು ಕಾರಿನ ನಡುವೆ ಅಪಘಾತ (ETV Bharat)

By ETV Bharat Karnataka Team

Published : Nov 1, 2024, 7:28 PM IST

ಶಿವಮೊಗ್ಗ:ಸಾಗರ ಹೊರವಲಯದ ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಆಟೋ ಚಾಲಕ ರಾಘವೇಂದ್ರ(45) ಹಾಗೂ ಪ್ರಯಾಣಿಕರಾದ ಮಾಲತಿ (35) ಮೃತಪಟ್ಟವರೆಂದು ಗುರುತಿಸಲಾಗಿದೆ.

ಕಾರೆಹೊಂಡದ ಒಂದೇ ಕುಟುಂಬದ ಮಾಲತಿ, ರಾಮಪ್ಪ ಮತ್ತು ಮಕ್ಕಳಾದ ಕೃತಿಕಾ ಹಾಗೂ ಸಾನ್ವಿಕ ಸಾಗರಕ್ಕೆ ಆಟೋದಲ್ಲಿ ಬರುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ವ್ಯಕ್ತಿಯ ಪ್ರಾಣ ಉಳಿಸುವ ಭರದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಆರು ಜನರ ಸಾವು

ABOUT THE AUTHOR

...view details