ರಾಯಚೂರು:ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣ ಹೊರವಲಯದಲ್ಲಿನ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮದ ಗುತ್ತಪ್ಪ (45) ಸ್ಥಳದಲ್ಲಿ ಮೃತಪಟ್ಟಿದ್ದು, ಮೊರಾರ್ಜಿ ವಸತಿ ನಿಲಯದಲ್ಲಿ ಡಿ ದರ್ಜೆ ನೌಕರರಾಗಿರುವ ಜಾಲಹಳ್ಳಿ ನಿವಾಸಿ ಜಗದೀಶ್ (50) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಮೃತರಿಬ್ಬರೂ ಬೈಕ್ನಲ್ಲಿ ದೇವದುರ್ಗ ಪಟ್ಟಣದಿಂದ ಜಾಲಹಳ್ಳಿ ಕಡೆ ತೆರಳುತ್ತಿದ್ದರು.
ಹೊರವಲಯದಲ್ಲಿ ಬರುವ ಪೆಟ್ರೋಲ್ ಬಂಕ್ ಬಳಿ ಜಾಲಹಳ್ಳಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಜಾಲಹಳ್ಳಿ ಕರೆ ತೆರಳುತ್ತಿದ್ದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಇದರಿಂದ ಬೈಕ್‌ನಲ್ಲಿದ್ದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಗುತ್ತಪ್ಪ ಸ್ಥಳದಲ್ಲಿಯೇ ಸ್ವಾನ್ನಪಿದ್ದರೆ, ಗಾಯಗೊಂಡ ಜಗದೀಶ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.