ಕಡಬ (ದಕ್ಷಿಣ ಕನ್ನಡ):ಕಡಬದ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಬಿನ್ನನ್ನು ಮಾರ್ಚ್ 5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡವು ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಂಮುತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿತ್ತು. ಇದೀಗ ಕೇರಳದಲ್ಲಿ ಮತ್ತಿಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.