ದೇವನಹಳ್ಳಿ (ಬೆಂಗಳೂರು) : ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮದ ಹೊಸ ಬೈಪಾಸ್ ರಸ್ತೆಯ ಸರ್ಕಾರಿ ಹಾಸ್ಟೆಲ್ ಸಮೀಪ ಇಂದು ಹಿಟ್ ಅಂಡ್ ರನ್ಗೆ ಇಬ್ಬರು ವೃದ್ಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಇಬ್ಬರು ವೃದ್ಧರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ರಸ್ತೆ ಕಾಮಗಾರಿಗೆ ಸಂಬಂಧಿಸಿದ ಲಾರಿಯೇ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯ ನಂತರ ಸ್ಥಳದಿಂದ ಚಾಲಕ ಪರಾರಿ ಆಗಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದರು.
ಬೂದಿಗೆರೆ ಗ್ರಾಮದ ಹೊಸ ಬೈಪಾಸ್ ರಸ್ತೆಯ ಹಾಸ್ಟೆಲ್ ಸಮೀಪದ ವೃತ್ತದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ KRDCL ಅಧಿಕಾರಿಗಳು ಮತ್ತು ರಸ್ತೆ ಕಾಮಗಾರಿ ಕಂಟ್ರಾಕ್ಟರ್ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.