ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ನಿಂತಿದ್ದ ಆಟೋಗೆ ಬಸ್​ ಡಿಕ್ಕಿ, ಇಬ್ಬರು ಯುವಕರು ಸಾವು - Bus Hits Auto

ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಹೊರವಲಯದಲ್ಲಿ ನಡೆದಿದೆ.

TWO PEOPLE DIED WHEN A PRIVATE BUS COLLIDED WITH A PARKED AUTO IN CHIKKAMAGALURU
ಚಿಕ್ಕಮಗಳೂರು: ನಿಂತಿದ್ದ ಆಟೋಗೆ ಬಸ್​ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು (ETV Bharat)

By ETV Bharat Karnataka Team

Published : Sep 15, 2024, 7:25 AM IST

ಚಿಕ್ಕಮಗಳೂರು:ನಿಂತಿದ್ದ ಆಟೋಗೆ ಹಿಂದಿನಿಂದ ಖಾಸಗಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ತೇಗೂರು ಸರ್ಕಲ್​ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ನಲ್ಲೂರು ಗ್ರಾಮದ ರಘು, ಮಲ್ಲೆ ದೇವರಹಳ್ಳಿ ಗ್ರಾಮದ ಮತ್ತೋರ್ವ ಯುವಕ ಸಾವನ್ನಪ್ಪಿದವರು. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಬದಿಯ ಹೂವಿನ ಅಂಗಡಿ ಸಂಪೂರ್ಣ ಜಖಂ ಆಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ:ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು, ಇಬ್ಬರಿಗೆ ಗಂಭೀರ ಗಾಯ - AURANGABAD CAR ACCIDENT

ABOUT THE AUTHOR

...view details