ಹಾವೇರಿ:ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಹಳೆಯ ಬೇವಿನಮರವೊಂದು ಬಿದ್ದು ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದ ಎಪಿಎಂಸಿ ಬಳಿ ನಡೆದಿದೆ. ಮೃತರನ್ನು 28 ವರ್ಷದ ಹನುಮಂತ ಮತ್ತು 29 ವರ್ಷದ ಮಂಜುನಾಥ ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಇಬ್ಬರು ಸಾವು! - Tree Fell On Moving Bike - TREE FELL ON MOVING BIKE
ಹಿರೇಕೆರೂರು ಪಟ್ಟಣದ ಎಪಿಎಂಸಿ ಬಳಿ ಬೈಕ್ನಲ್ಲಿ ಹೋಗುತ್ತಿದ್ದವರ ಮೇಲೆ ಮರವೊಂದು ಬಿದ್ದು, ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
Published : Jul 22, 2024, 5:10 PM IST
ಹನುಮಂತ ಯತ್ತಿನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮಂಜುನಾಥ್ ಚಿನ್ನಮುಳಗುಂದ ಗ್ರಾಮದ ನಿವಾಸಿ. ಹಿರೇಕೆರೂರು ಮತ್ತು ಮಾಸೂರಿಗೆ ಹೋಗುವ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಮೃತ ದೇಹಗಳನ್ನು ಹಿರೇಕೆರೂರು ತಾಲೂಕು ಆಸ್ಪತ್ರೆಗೆ ತರಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಿದ್ದ ಬೇವಿನಮರದ ತೆರವು ಕಾರ್ಯಚರಣೆ ಕೈಗೊಳ್ಳಲಾಗಿದೆ. ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ - MURDER CASE