ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಪೋಕ್ಸೋ ಪ್ರಕರಣ: ಬಾಲಕನ ಮೇಲೆ ಯುವಕನಿಂದ, ಅಪ್ರಾಪ್ತೆ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ - Pocso Case - POCSO CASE

ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಪೋಕ್ಸೋ ಪ್ರಕರಣಗಳು
ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಪೋಕ್ಸೋ ಪ್ರಕರಣಗಳು (ETV Bharat)

By ETV Bharat Karnataka Team

Published : Aug 26, 2024, 11:09 AM IST

ಹುಬ್ಬಳ್ಳಿ:ನಗರದಲ್ಲಿ ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿವೆ‌. ಯುವಕನೋರ್ವ ಬಾಲಕನ ಮೇಲೆ ಅತ್ಯಾಚಾರ ಎಸಗಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವಕನಿಂದ ಅತ್ಯಾಚಾರ:ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕನ ಮೇಲೆ 24 ವರ್ಷದ ಯುವಕನೊಬ್ಬ ಅತ್ಯಾಚಾರ ಎಸೆಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿಯನ್ನು ಕಸಬಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಾಸುಮ್ ಹುಲಮನಿ ಬಂಧಿತ ಆರೋಪಿ. ಆರೋಪಿ ಗಾರೆ ಮತ್ತು ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಮೊಬೈಲ್ ಕೂಡಿಸುವುದಾಗಿ ಕರೆದುಕೊಂಡು ಹೋಗಿ ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಅಪ್ರಾಪ್ತೆ ಮೇಲೆ ಹೀನ ಕೃತ್ಯ:ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ನೂರ ಅಹಮ್ಮದ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ರಕ್ತ ಪರೀಕ್ಷೆ ವರದಿಯಲ್ಲಿ ಡ್ರಗ್​ ಸೇವನೆ ದೃಢ - Karkala young woman rape case

ABOUT THE AUTHOR

...view details