ಹಾವೇರಿ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದ ಬಳಿ ಬುಧವಾರ ನಡೆದಿದೆ.
ರಾಕೇಶ ಕೂಲೇರ್ (12) ಮತ್ತು ಸಂತೋಷ ಚನ್ನಗೌಡ (12) ಮೃತರು. ಇವರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದರು. ಕುಮದ್ವತಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಈಜು ಬಾರದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.