ತುಮಕೂರು:ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಕೆಎಸ್ಆರ್ಟಿಸಿ ಬಸ್‌ನಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತುಮಕೂರು: ಬಸ್‌ನಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಸಾವು: ಸಿಸಿಟಿವಿಯಲ್ಲಿ ಸೆರೆ - Road Accident - ROAD ACCIDENT
ಕೆಎಸ್ಆರ್ಟಿಸಿ ಬಸ್‌ನಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆಯಿತು.

Published : Aug 5, 2024, 2:49 PM IST
ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ 49 ಮೃತರು. ಬಟವಾಡಿ ಕಡೆಯಿಂದ ಮಹಾತ್ಮ ಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದ ಚಂದ್ರಶೇಖರ್ ಅವರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್‌ನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೊದಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಅವರು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ - Police Inspector suicide