ಕಲಬುರಗಿ:ತಲೆ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಹೊರವಲಯದ ತಾವರಗೇರಾ ಬಳಿ ನಡೆದಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ತಾಜ ಸುಲ್ತಾನಪುರ ನಿವಾಸಿಗಳಾದ ಶರಣಮ್ಮ (45) ಹಾಗೂ ಚಂದಮ್ಮ (45) ಕೊಲೆಯಾದ ಮಹಿಳೆಯರು ಎಂದು ಗುರುತಿಸಲಾಗಿದೆ.
ಪ್ರತಿನಿತ್ಯದಂತೆ ಭಾನುವಾರ ಬೆಳಗ್ಗೆ ನಗರದ ಗಂಜ್ನಿಂದ ಬಸ್ನಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದರು. ನಂತರ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ, ಇದೇ ರಸ್ತೆಯಲ್ಲಿ ತೆರಳುತ್ತಿದ್ದ ರೈತರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಜಾರಿಯಲ್ಲಿದೆ.
ಪ್ರತ್ಯೇಕ ಪ್ರಕರಣ - ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ರಸ್ತೆ ಅಪಘಾತವಾದಾಗ ಸ್ಥಳಕ್ಕೆ ಹೋಗಿ ಜಗಳ ಬಿಡಿಸಿದ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಆಳಂದ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಗಣಪತರಾವ್ ಘಂಟೆ ಹಲ್ಲೆಗೊಳಗಾದವರು.