ರಾಯಚೂರು/ವಿಜಯಪುರ:ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದ ಬಾವಿಯಲ್ಲಿ ಯುವಕನ ಶವ ದೊರೆತಿದೆ. ಗಣೇಶ ಮಾನಪ್ಪ ಸೋಮಲಾಪುರ (21) ಮೃತಪಟ್ಟ ಯುವಕನೆಂದು ಗುರುತಿಸಲಾಗಿದೆ.
ಲಿಂಗಸೂಗೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಗ ಮೃತಪಟ್ಟ ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿನ ಕುರಿತು ಸಂಶಯ ವ್ಯಕ್ತಪಡಿಸಲಾಗಿದೆ.

ಈ ಕುರಿತು ದೂರವಾಣಿ ಮೂಲಕ ಲಿಂಗಸೂಗೂರು ಪೊಲೀಸರನ್ನು ಸಂಪರ್ಕಿಸಿದಾಗ, ಬಾವಿಯಲ್ಲಿ ಯುವಕ ಮೃತಪಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕುಟುಂಬಸ್ಥರು ನೀಡುವ ದೂರಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದುರುದ್ದೇಶ ಪೂರಕವಾಗಿ ರಾತ್ರಿ 9 ಗಂಟೆಯ ಸುಮಾರಿಗೆ ಯುವಕನನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಬಂದು ಪಾರ್ಟಿ ಮಾಡಿ ಬಳಿಕ ಬಾವಿಗೆ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.