ಕರ್ನಾಟಕ

karnataka

ETV Bharat / state

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪೂಜಾರಿ, ಹೆಗ್ಡೆ ಮಧ್ಯೆ 'ಜಯ' ಯಾರಿಗೆ? - Udupi Chikkamagalur Constituency - UDUPI CHIKKAMAGALUR CONSTITUENCY

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಿದ್ದ ಬಿಜೆಪಿಗೆ ಈ ಬಾರಿ ಕಾಂಗ್ರೆಸ್ ಸಮಬಲದ ಹೋರಾಟ ನೀಡಿದೆ. ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್​​ನ ಜಯಪ್ರಕಾಶ್ ಹೆಗ್ಡೆ ಬಗ್ಗೆ ಕ್ಷೇತ್ರದಲ್ಲಿ ಒಳ್ಳೆಯ ಅಭಿಪ್ರಾಯವಿದ್ದು, ಮತದಾರ ಯಾರತ್ತ? ಎಂಬುದು ಜೂನ್ 4ರಂದು ಗೊತ್ತಾಗಲಿದೆ.

ಕೋಟಾ ಶ್ರೀನಿವಾಸ ಪೂಜಾರಿ, ಜಯಪ್ರಕಾಶ್ ಹೆಗ್ಡೆ
ಕೋಟಾ ಶ್ರೀನಿವಾಸ ಪೂಜಾರಿ, ಜಯಪ್ರಕಾಶ್ ಹೆಗ್ಡೆ (ETV Bharat)

By ETV Bharat Karnataka Team

Published : Jun 2, 2024, 3:16 PM IST

ಉಡುಪಿ:ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದರೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮತ್ತು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ನಡುವಿನ ಹಣಾಹಣಿಯಲ್ಲಿ ಜಯ ಯಾರಿಗೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಈ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಾತಾವರಣವಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಲೆ ಇದ್ದುದರಿಂದ, ಅವರು ಗೆಲ್ಲುತ್ತಾರೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಈ ಬಾರಿ ಅಂಥ ವಾತಾವರಣ ಗೋಚರಿಸುತ್ತಿಲ್ಲ.

ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಹಾಗು ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಈ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಉಡುಪಿಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೆ, ಚಿಕ್ಕಮಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ.

ಕಳೆದ ಬಾರಿ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರು. ಶೋಭಾ 3 ಲಕ್ಷ ಮತಗಳ ಅಂತರದಿಂದ ಭಾರೀ ಜಯ ಸಾಧಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಹಲವು ಲೆಕ್ಕಾಚಾರಗಳಿಂದ ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ನಡೆದಿದೆ. ಅವುಗಳಲ್ಲಿ ಜಾತಿ ಲೆಕ್ಕಾಚಾರ, ಗ್ಯಾರಂಟಿ ಯೋಜನೆ, ಅಭ್ಯರ್ಥಿಗಳ ಬಗೆಗಿನ ಒಲವುಗಳೆಲ್ಲವೂ ಸೇರಿದೆ.

ಜಯಪ್ರಕಾಶ್ ಹೆಗ್ಡೆ (ETV Bharat)

ಇದನ್ನೂ ಓದಿ: 3ನೇ ಸಲವೂ ಎನ್​​ಡಿಎ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳು!, ಅಷ್ಟಕ್ಕೂ NDA 400 ಸ್ಥಾನ ಗೆಲ್ಲುತ್ತಾ? - exit poll

ಜಯಪ್ರಕಾಶ್ ಹೆಗ್ಡೆ ಸ್ಪರ್ಧಿಸುತ್ತಿರುವುದು ಕಾಂಗ್ರೆಸ್​ಗೆ ಪ್ಲಸ್ ಪಾಯಿಂಟ್. ಹತ್ತು ವರ್ಷಗಳ ಹಿಂದೆ ಸಣ್ಣ ಅವಧಿಗೆ ಸಂಸದರಾಗಿದ್ದಾಗ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಉಡುಪಿ ಜಿಲ್ಲೆ ಉದಯಕ್ಕೆ ಕಾರಣರಾದವರು ಹಲವು ವರ್ಷಗಳಿಂದ ಅಧಿಕಾರದಿಂದ ವಂಚಿತರಾಗಿದ್ದಾರೆ ಎಂಬ ಭಾವನೆ ಜನರಲ್ಲಿದೆ. ಜಿಲ್ಲೆಯ ಪ್ರಬಲ ಬಂಟ ಸಮುದಾಯವರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಈ ಬಾರಿ ಅವರ ಸಮುದಾಯ ಕೈ ಹಿಡಿಯುವ ಸಾಧ್ಯತೆ ಹೆಚ್ಚು. ಇನ್ನು ಚಿಕ್ಕಮಗಳೂರಿನಲ್ಲಿ ಒಕ್ಕಲಿಗರು ಜಯಪ್ರಕಾಶ್ ಹೆಗ್ಡೆ ಪರ ಒಲವು ತೋರಿಸಿದ್ದಾರೆ ಎಂದು ಹೇಳಲಾಗಿದೆ.

ಗ್ಯಾರಂಟಿ ಯೋಜನೆಗಳ ವಿಶ್ವಾಸ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಭರವಸೆಗೆ ಉಡುಪಿ ಜಿಲ್ಲೆಯಲ್ಲಿ ಬೆಂಬಲ ಸಿಕ್ಕಿರಲಿಲ್ಲ. ಚಿಕ್ಕಮಗಳೂರಲ್ಲಿ ಉತ್ತಮ ಬೆಂಬಲ ಸಿಕ್ಕಿತ್ತು. ಆದರೆ ಈ ಬಾರಿ ಗ್ಯಾರಂಟಿ ಫಲಾನುಭವಿಗಳು ಉಡುಪಿಯಲ್ಲಿಯೂ ಕಾಂಗ್ರೆಸ್ ಪರ ಮತ ನಿಂತಿದ್ದಾರೆ ಎಂಬ ಮಾತುಗಳಿವೆ.

ಕೋಟಾ ಶ್ರೀನಿವಾಸ ಪೂಜಾರಿ (ETV Bharat)

ಕೋಟಾಗೆ ಮೋದಿ, ಹಿಂದೂ ಕಾರ್ಯಕರ್ತರ ಬಲ:ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಸರಳ ರಾಜಕಾರಣಿಯಾಗಿ ಬಿಂಬಿತವಾಗಿದ್ದಾರೆ. ಇದು ಮತದಾರರನ್ನು ಸೆಳೆಯುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿರುವ ಬಿಲ್ಲವ ಸಮುದಾಯದ ಮತದಾರರಿದ್ದು, ಅದೇ ಸಮುದಾಯದ ಕೋಟಾ ಶ್ರೀನಿವಾಸ ಪೂಜಾರಿಗೆ ಅತೀ ದೊಡ್ಡ ಶಕ್ತಿಯಾಗಿದ್ದು, ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ನಿರ್ಣಾಯಕರಾಗಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಅಭ್ಯರ್ಥಿ ಯಾರೇ ಆದರೂ ಬಿಜೆಪಿಗೆ ಮತ ಚಲಾಯಿಸುವ ಮತದಾರರು ಕ್ಷೇತ್ರದಲ್ಲಿದ್ದಾರೆ. ಆದರೂ ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸುಲಭದಲ್ಲಿ ಗೆಲ್ಲುವವರು ಯಾರು ಎಂದು ಹೇಳುವ ಪರಿಸ್ಥಿತಿ ಇಲ್ಲ.

ಇದನ್ನೂ ಓದಿ: ಬೆಳಗಾವಿ ಲೋಕಸಮರ: ಶೆಟ್ಟರ್ - ಮೃಣಾಲ್ ಮಧ್ಯೆ ಜಿದ್ದಾಜಿದ್ದಿ, ಹೇಗಿದೆ ಲೆಕ್ಕಾಚಾರ? - Belagavi Lokasabha Fight

ABOUT THE AUTHOR

...view details