ಕರ್ನಾಟಕ

karnataka

ETV Bharat / state

ಬಾಂಗ್ಲಾ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಅಂತಾರಾಷ್ಟ್ರೀಯ ಮಟ್ಟದ ಪಿತೂರಿ: ಉಡುಪಿ ಶ್ರೀಗಳ ಆತಂಕ - Bangladesh Atrocities

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿಯ ಪುತ್ತಿಗೆ ಶ್ರೀಗಳು ಮತ್ತು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಹಿಂದೂಗಳು ಜಾಗೃತರಾಗಿ ಹಿಂದೂ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದ್ದಾರೆ.

ATROCITIES ON BANGLA HINDUS
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ (ETV Bharat)

By ETV Bharat Karnataka Team

Published : Aug 14, 2024, 6:56 PM IST

ಉಡುಪಿ:ಬಾಂಗ್ಲಾ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವು ಅಂತಾರಾಷ್ಟ್ರೀಯ ಮಟ್ಟದ ಪಿತೂರಿ ಎಂದು ಉಡುಪಿಯ ಪುತ್ತಿಗೆ ಶ್ರೀಗಳು ಆತಂಕ ವ್ಯಕ್ತಪಡಿಸಿದರು.

ಉಡುಪಿಯಲ್ಲಿಂದು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ, ವಿದ್ಯಮಾನಗಳು ಅತ್ಯಂತ ಕಳವಳಕಾರಿ. ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಹಿಂದೂಗಳಿಗೆ ತೊಂದರೆ ನೀಡಲಾಗುತ್ತಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದ ಪಿತೂರಿಯ ಭಾಗವಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅತಂಕ ವ್ಯಕ್ತಪಡಿಸಿದರು.

ಈ ಹಿಂದೆ ಕಾಶ್ಮೀರದಲ್ಲಿ ಏನು ನಡೆದಿತ್ತೋ ಅದೇ ಘಟನೆ ಬಾಂಗ್ಲಾದೇಶದಲ್ಲಿ ಮತ್ತೆ ಮರುಕಳಿಸಿದೆ. ಇಂಥ ಸಮಸ್ಯೆಗಳ ಮೂಲೋತ್ಪಾಟನೆಗೆ ಕೇಂದ್ರ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು. ದಿಟ್ಟ ಹೆಜ್ಜೆಯನ್ನಿಡುವ ಮೂಲಕ ಶಾಶ್ವತ ಪರಿಹಾರ ಒದಗಿಸಬೇಕು. ಹಿಂದೂಗಳು ಜಾಗೃತರಾಗಿ ಹಿಂದೂ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದರು.

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಹ ಈ ಕುರಿತಾಗಿ ಮಾತನಾಡಿ, ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ಬಹು ಖೇದವಾಗಿದೆ. ಭಾರತದ ಹಿಂದೂಗಳು ಈ ಬಗ್ಗೆ ಕಳವಳಪಡಬೇಕು ಎಂದರು.

ಹಿಂದೂಗಳ ಮೇಲಿನ ಹಲ್ಲೆಗಳ ವಿರುದ್ಧ ಧ್ವನಿ ಎತ್ತುವವರನ್ನೂ ದಮನಿಸುವ ಪ್ರವೃತ್ತಿ ನಮ್ಮ ದೇಶದಲ್ಲೂ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜ ಜಾಗೃತವಾಗಬೇಕು. ಯಾವುದೇ ಸರ್ಕಾರವನ್ನೂ ಆಶ್ರಯಿಸುವ ಪರಿಸ್ಥಿತಿ ಈಗಿಲ್ಲ. ಹೀಗಾಗಿ ದೇವರಿಗೆ ಶರಣಾಗಬೇಕು. ಸಮಾಜದಲ್ಲಿ ಶಾಂತಿ ಮತ್ತು ಸುಭೀಕ್ಷೆ ನೆಲೆಸುವಂತೆ ಪ್ರಾರ್ಥಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ:ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ 205 ಕಡೆ ದಾಳಿ; ನೂತನ ಮುಖ್ಯಸ್ಥರಿಗೆ ದೂರು - Hindus attacked in bangladesh

ABOUT THE AUTHOR

...view details