ಉಡುಪಿ:ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡ್ಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಪ್ರೀತಂ ಕೊನೆಯುಸಿರೆಳೆದಿದ್ದಾರೆ.