ಕರ್ನಾಟಕ

karnataka

ETV Bharat / state

ಉಡುಪಿ: 3 ತಿಂಗಳಿಂದ ಇನ್​ಸ್ಟಾಗ್ರಾಮ್​​ನಲ್ಲಿ ಪರಿಚಯ, ಅಪಹರಿಸಿ ಯುವತಿಯ ಮೇಲೆ ಅತ್ಯಾಚಾರ - Girl RAPE IN UDUPI - GIRL RAPE IN UDUPI

ಉಡುಪಿ ಜಿಲ್ಲೆಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

UDUPI WOMAN RAPE  UDUPI CRIME NEWS  RAPE ACCUSED  UDUPI
ಉಡುಪಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ (ETV Bharat)

By ETV Bharat Karnataka Team

Published : Aug 24, 2024, 12:07 PM IST

Updated : Aug 24, 2024, 2:57 PM IST

ಅತ್ಯಾಚಾರದ ಬಗ್ಗೆ ಮಾಹಿತಿ ನೀಡುತ್ತಿರುವ ಎಸ್​ಪಿ ಕೆ ಅರುಣ್​ ಕುಮಾರ್​ (ETV Bharat)

ಉಡುಪಿ:ಇನ್​ಸ್ಟಾಗ್ರಾಮನಲ್ಲಿ ಪರಿಚಯವಾದ ಯುವಕನೋರ್ವ 21 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಕಾರ್ಕಳ ಠಾಣೆಯಲ್ಲಿ ದಾಖಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಅಲ್ತಾಫ್​ನನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕೆ.ಅರುಣ್ ಕುಮಾರ್ ಮಾತನಾಡಿ, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಯುವತಿ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಳಿಕ ಮಾರ್ಗ ಮಧ್ಯದಲ್ಲಿ ದ್ರವ ರೂಪದ ವಸ್ತುವಿನಲ್ಲಿ ಅಮಲು ಪದಾರ್ಥ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಲ್ತಾಫ್​ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.

ಓದಿ:ಇಲಿ ಪಾಷಾಣ ಸೇವಿಸಿ​ ಅತ್ಯಾಚಾರ ಪ್ರಕರಣದ ಆರೋಪಿ ಸಾವು - Rape Case Accused Dies

Last Updated : Aug 24, 2024, 2:57 PM IST

ABOUT THE AUTHOR

...view details