ಕರ್ನಾಟಕ

karnataka

ETV Bharat / state

ಯುಜಿಸಿಇಟಿ-24: ಆಪ್ಶನ್ ಎಂಟ್ರಿ ಆರಂಭ, 7 ದಿನ ಅವಕಾಶ - UGCET 24 - UGCET 24

ಯುಜಿಸಿಇಟಿ-24ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಯ್ಕೆ ದಾಖಲಿಸಲು ಕೆಇಎ 7 ದಿನಗಳ ಕಾಲಾವಕಾಶ ನೀಡಿದೆ.

KEA
ಕೆಇಎ (ETV Bharat)

By ETV Bharat Karnataka Team

Published : Jul 25, 2024, 9:52 AM IST

ಬೆಂಗಳೂರು: ಯುಜಿಸಿಇಟಿ-24ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಆಯ್ಕೆ)ಗಳನ್ನು ದಾಖಲಿಸಲು ಅವಕಾಶ ನೀಡಿದ್ದು, ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏಳು ದಿನ ಅವಕಾಶ ಕಲ್ಪಿಸಿದೆ.

ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೆ ಆಪ್ಶನ್ (ಆಯ್ಕೆ)ಗಳನ್ನು ದಾಖಲಿಸಲು ಜುಲೈ 23ರಿಂದ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಇಚ್ಛೆಗಳನ್ನು ದಾಖಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಛೆ/ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಆಪ್ಶನ್​​ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬಹುದು.

ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್ ನೀಡಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಆಯ್ಕೆ/ಇಚ್ಛೆಗಳ ದಾಖಲೆಗೆ ನಿಗದಿಪಡಿಸಿದ ಕೊನೆ ದಿನದ ನಂತರ ಮೂರು ದಿನಗಳ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಅದರ ನಂತರ ಮೂರು ದಿನ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ‌ ನೀಡಲಾಗುತ್ತದೆ. ಮೂರು ದಿನಗಳ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸುಗಳು:ನವದೆಹಲಿಯರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು/ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಅದರಂತೆ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಆಪ್ಶನ್​​ಗಳನ್ನು ಸೇರಿಸುವ ಬಗ್ಗೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮುಡಾ 'ಹಗರಣ': ಸದನದಲ್ಲೇ ಮಲಗಿ ಪ್ರತಿಪಕ್ಷಗಳ ಅಹೋರಾತ್ರಿ ಧರಣಿ; ಭಜನೆ, ಅಂತ್ಯಾಕ್ಷರಿ ಹಾಡಿದ ಶಾಸಕರು - BJP JDS Night Long Protest

ABOUT THE AUTHOR

...view details