ಶಿವಮೊಗ್ಗ: ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಕುಸಿದು ಇಬ್ಬರು ಗಾಯಗೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಸಂಭಾವ್ಯ ದುರಂತ ತಪ್ಪಿದೆ.
ಚೌಡಮ್ಮ ದೇವಾಲಯ ರಸ್ತೆಯಲ್ಲಿ ಕಳೂರು ಸೇವಾ ಸಹಕಾರ ಬ್ಯಾಂಕ್ಗಾಗಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡಕ್ಕೆ ಸೆಂಟ್ರಿಂಗ್ ಹಾಕಲಾಗಿತ್ತು. ನಿನ್ನೆ ರಾತ್ರಿ ಸೆಂಟ್ರಿಂಗ್ ಏಕಾಏಕಿ ಕುಸಿದಿದೆ. ಇದರಿಂದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಗಾಯಾಳುಗಳು ಹೊಸನಗರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಸಂಭವನೀಯ ದುರಂತ ತಪ್ಪಿದೆ. ಅಪಾಯದಿಂದ ಉಳಿದ ಕಾರ್ಮಿಕರು ಪಾರಾಗಿದ್ದಾರೆ.