ಧಾರವಾಡ:ಸೂಕ್ತ ದಾಖಲೆ ಇಲ್ಲದ ಚಿನ್ನ, ಬೆಳ್ಳಿ ಸಾಗಾಟ ಪ್ರಕರಣ ಧಾರವಾಡದಲ್ಲಿ ನಡೆದಿದೆ. ಖಾಸಗಿ ಬಸ್ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮುಂಬೈನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಖಾಸಗಿ ಬಸ್ನಲ್ಲಿ ವ್ಯಕ್ತಿಯೊಬ್ಬ ಚಿನ್ನಾಭರಣ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಪೊಲೀಸರು ದಾಳಿ ಮಾಡಿ ಲಕ್ಷಾಂತರ ರೂ. ಚಿನ್ನಾಭರಣ ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಧಾರವಾಡ ಹೊರವಲಯದ ನರೇಂದ್ರ ಬೈಪಾಸ್ ಬಳಿ ಬಸ್ ತಡೆದು ತಪಾಸಣೆ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.