ಕರ್ನಾಟಕ

karnataka

ETV Bharat / state

ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ಅಮಿತ್‌ ಶಾ ಮೊದಲ ಭೇಟಿ! - Mysore Tour

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.10 ಹಾಗೂ 11ರಂದು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ

By ETV Bharat Karnataka Team

Published : Feb 10, 2024, 10:43 AM IST

ಮೈಸೂರು:ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಅಮಿತ್‌ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಮಾಡಲಿದ್ದು, ಅದಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಶನಿವಾರ (ಫೆಬ್ರವರಿ 10) ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್‌ ಶಾ, ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಫೆ.11ರ ಬೆಳಗ್ಗೆ 11ಕ್ಕೆ ಚಾಮುಂಡಿ ಬೆಟ್ಟಕ್ಕೆ ತೆರಳುವ ಅವರು ನಂತರ ಮಧ್ಯಾಹ್ನ 12 ಗಂಟೆಗೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌, ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.35ಕ್ಕೆ ನಗರದ ರಾಡಿಸನ್ ಬ್ಲೂ ಹೋಟೆಲ್​ನಲ್ಲಿ ಸಭೆಯಲ್ಲಿ ಭಾಗವಹಿಸಲಿರುವ ಅಮಿತ್‌ ಶಾ, ಸಂಜೆ 4.55ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ದೆಹಲಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅವರ ಆಗಮನ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಕೇಂದ್ರ ಸಚಿವರಾಗುವ ಸುದ್ದಿ ಎಲ್ಲಿ ಹುಟ್ಟಿತು ಅನ್ನೋದು ನನಗೆ ಯಕ್ಷಪ್ರಶ್ನೆಯಾಗಿ ಉಳಿದಿದೆ: ವದಂತಿಗೆ ತೆರೆ ಎಳೆದ ಹೆಚ್​ಡಿಕೆ

ABOUT THE AUTHOR

...view details