ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್​ಡಿಕೆ ಜನತಾ ದರ್ಶನ: ಅಧಿಕಾರಿಗಳಿಗೆ ನಿರ್ಬಂಧ ಆರೋಪ - Janata Darshana in Mandya - JANATA DARSHANA IN MANDYA

ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಹೆಚ್​ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ವೇಳೆ ಯಾವುದೇ ಅಧಿಕಾರಿಗಳು ಇರಲಿಲ್ಲ.

union-minister-h-d-kumaraswamy-conduct-janata-darshana-in-mandya
ಹೆಚ್​ಡಿಕೆ ಜನತಾ ದರ್ಶನ (ETV Bharat)

By ETV Bharat Karnataka Team

Published : Jul 5, 2024, 8:48 PM IST

Updated : Jul 5, 2024, 9:05 PM IST

ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ (ETV Bharat)

ಮಂಡ್ಯ :ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮಂಡ್ಯದ ಸಂಸದರಾಗಿದ್ದ ಕುಮಾರಸ್ವಾಮಿ ಇದೀಗ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರದ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದು, ಮಂಡ್ಯ ನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಜನತಾ ದರ್ಶನ ನಡೆಸಿದ ಹೆಚ್​ಡಿಕೆ ವಿಕಲಚೇತನರಿಗೆ ಮೊದಲ ಪ್ರಾಶಸ್ತ್ಯ ನೀಡಿ ಅವರ ಸಮಸ್ಯೆ ಆಲಿಸಿದ್ರು. ಬಳಿಕ ಸಮಸ್ಯೆಗಳನ್ನು ಹೊತ್ತು ತಂದಿದ್ದ ನೂರಾರು ಜನರನ್ನು ಒಬ್ಬೊಬ್ಬರಾಗಿ ಕರೆಸಿ ಸಮಸ್ಯೆಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ರು.

ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಯಾವುದೇ ಅಧಿಕಾರಿಗಳು ಪಾಲ್ಗೊಂಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ, ತಮ್ಮ ಜನತಾ ದರ್ಶನ ತಡೆಯಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನತಾ ದರ್ಶನ ಕಾರ್ಯಕ್ರಮಕ್ಕೂ‌ ಮುನ್ನ ನಗರದ ಕಾಳಿಕಾಂಬ ದೇಗುಲಕ್ಕೆ ಹೆಚ್​ಡಿಕೆ ಭೇಟಿ ನೀಡಿದ್ರು‌. ಈ ವೇಳೆ ದೇಗುಲದ ಬಳಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಕುಮಾರಸ್ವಾಮಿಯವರಿಗೆ ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಬಿಜೆಪಿ ಪಕ್ಷದ ಕಾರ್ಯಕರ್ತರು ಚುನಾವಣೆ ವೇಳೆ ಕುಮಾರಸ್ವಾಮಿ ಗೆಲುವಿಗಾಗಿ ದೇಗುಲದ ಆವರದಲ್ಲಿನ ಬಿಲ್ವಪತ್ರೆ ಮರಕ್ಕೆ ಕಟ್ಟಿದ್ದ ಹರಕೆಯ ಗಂಟು ಬಿಚ್ಚಿ ದೇವಿಗೆ ಪೂಜೆ ಸಲ್ಲಿಸಿದ್ರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮೂಡಾ ಹಗರಣದ ವಿಚಾರದಲ್ಲಿ ಸಿಎಂ ಆಗಲು ಹೊರಟಿರುವ ವ್ಯಕ್ತಿಯಿಂದಲೇ ಈ ಹಗರಣ ಬಯಲಿಗೆ ಬಂದಿದೆ ಎಂದು ಪರೋಕ್ಷವಾಗಿ ಡಿಕೆಶಿ ಕೈವಾಡದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ರು. ಅಲ್ಲದೇ ಟ್ರಯಲ್ ಬ್ಲಾಸ್ಟ್ ನಡೆಸದಂತೆ ಹೋರಾಟ ಮಾಡ್ತಿರೋ ಹೋರಾಟಗಾರರಿಂದ ಮನವಿ ಸ್ವೀಕರಿಸಿ ಟ್ರಯಲ್ ಬ್ಲಾಸ್ಟ್ ವಿಚಾರದಲ್ಲಿ ಜಿಲ್ಲೆಗೆ ನ್ಯಾಯ ದೊರಕಿಸುವ ಭರವಸೆ ನೀಡಿದ್ರು.

ಒಟ್ಟಾರೆ ಕ್ಷೇತ್ರದ ಜನರ ಸಮಸ್ಯೆಗಳನ್ನ ಆಲಿಸಲು ಮುಂದಾದ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಇಂದು ತಮ್ಮ ಜನತಾ ದರ್ಶನದಲ್ಲಿ ನೂರಾರು ಜನರಿಂದ ಸಮಸ್ಯೆಗಳ ಅರ್ಜಿ ಸ್ವೀಕರಿಸಿದ್ದಾರೆ. ಆದರೆ, ಅಧಿಕಾರಿಗಳೇ ಇಲ್ಲದೆ ನಡೆದ ಈ ಜನತಾ ದರ್ಶನದಲ್ಲಿ ಕೇಂದ್ರ ಸಚಿವರು ಹೇಗೆ ಜನರ ಸಮಸ್ಯೆಗಳನ್ನು ಬಗೆಹರಿಸ್ತಾರೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇದನ್ನೂ ಓದಿ :ಭದ್ರಾವತಿಯ VISL ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ - H D Kumaraswamy

Last Updated : Jul 5, 2024, 9:05 PM IST

ABOUT THE AUTHOR

...view details