ಕರ್ನಾಟಕ

karnataka

ETV Bharat / state

ಚನ್ನಪಟ್ಟಣ ಅಭ್ಯರ್ಥಿ ವಿಚಾರದ ಬಗ್ಗೆ ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದು ಹೀಗೆ - H D KUMARASWAMY - H D KUMARASWAMY

ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ಹೆಚ್​ಡಿಕೆ ರಾಜೀನಾಮೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ಹೆಚ್​ಡಿಕೆ ರಾಜೀನಾಮೆ (ETV Bharat)

By ETV Bharat Karnataka Team

Published : Jun 15, 2024, 3:21 PM IST

ಬೆಂಗಳೂರು: ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ವಿಧಾನಸೌಧದಲ್ಲಿ ಇಂದು ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸತ್​ಗೆ ಆಯ್ಕೆ ಆದ ಮೇಲೆ ಎರಡರಲ್ಲಿ ‌ಒಂದು ಸ್ಥಾನ ಉಳಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಅಭ್ಯರ್ಥಿ ವಿಚಾರದ ಬಗ್ಗೆ ಮುಂದೆ ಮಾತನಾಡೋಣ.‌ ಉಪ ಚುನಾವಣೆ ಬರಲಿ ಆಮೇಲೆ ಮಾತನಾಡೋಣ ಎಂದರು.

ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ಡಿ.ಕೆ ಸುರೇಶ್ ಹೇಳಿಕೆಗೆ ತಿರುಗೇಟು ನೀಡಿದ ಹೆಚ್​ಡಿಕೆ, ಪಾಪ ಅವರೇನೋ ದೊಡ್ಡವರು. ಅವರು ಏನು ಬೇಕಾದರೂ ಮಾತನಾಡಲಿ ಬಿಡಿ ಎಂದರು. ಕುಮಾರಸ್ವಾಮಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಫ್ಟ್ ಕಾರ್ನರ್ ಅನುಸರಿಸುತ್ತಿದ್ದಾರೆ ಎಂಬ ವಿಚಾರ‌ಕ್ಕೆ ಪ್ರತಿಕ್ರಿಯಿಸಿ, ಸಿಎಂ ನಡೆಯನ್ನು ಸ್ವಾಗತ ಮಾಡೋಣ ಬಿಡಿ ಎಂದು ಹೇಳಿದರು.

ಬಳಿಕ ಅವರು ತಮ್ಮ ತವರು ಕ್ಷೇತ್ರ ಚನ್ನಪಟ್ಟಣಕ್ಕೆ ತೆರಳಿದರು. ಶಾಸಕರಾಗಿ ಇಂದು ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪೂರ್ವ ನಿಯೋಜಿತವಾಗಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ:ಮತ್ತೊಂದೆಡೆ, ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ ಸಲ್ಲಿಸಿದರು. ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದರು.

ಇದೇ ವೇಳೆ ತಮ್ಮ ಕಚೇರಿಗೆ ಭೇಟಿ ನೀಡಿದ ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿನಂದಿಸಿದರು.

ಇದನ್ನೂ ಓದಿ:ಎಷ್ಟೇ ಸಚಿವ ಸ್ಥಾನ ನೀಡಿದರೂ, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಜನ ಬೆಂಬಲ ನೀಡಲ್ಲ: ಸಿದ್ದರಾಮಯ್ಯ - CM Siddaramaiah

ABOUT THE AUTHOR

...view details