ಕರ್ನಾಟಕ

karnataka

ETV Bharat / state

ಬಿಹೆಚ್​ಇಎಲ್ ವಿದ್ಯುನ್ಮಾನ ಘಟಕಕ್ಕೆ ಕೇಂದ್ರ ಸಚಿವ ಹೆಚ್​ಡಿಕೆ ಭೇಟಿ: ಸಾರ್ವಜನಿಕ ಉದ್ಯಮಗಳಿಗೆ ಕಾಯಕಲ್ಪದ ಭರವಸೆ - H D Kumaraswamy - H D KUMARASWAMY

ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಬಿಹೆಚ್​ಇಎಲ್ ಉತ್ತಮವಾಗಿ ನಡೆಯುತ್ತಿದೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಬಿಹೆಚ್​ಇಎಲ್ ವಿದ್ಯುನ್ಮಾನ ಘಟಕಕ್ಕೆ  ಹೆಚ್​ಡಿಕೆ ಭೇಟಿt
ಬಿಹೆಚ್​ಇಎಲ್ ವಿದ್ಯುನ್ಮಾನ ಘಟಕಕ್ಕೆ ಹೆಚ್​ಡಿಕೆ ಭೇಟಿ (ETV Bharat)

By ETV Bharat Karnataka Team

Published : Aug 27, 2024, 4:10 PM IST

Updated : Aug 27, 2024, 7:21 PM IST

ಬಿಹೆಚ್​ಇಎಲ್ ವಿದ್ಯುನ್ಮಾನ ಘಟಕಕ್ಕೆ ಹೆಚ್​ಡಿಕೆ ಭೇಟಿ (ETV Bharat)

ಬೆಂಗಳೂರು:ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್​ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಬಿಹೆಚ್​ಇಎಲ್ ವಿದ್ಯುನ್ಮಾನ ಘಟಕಕ್ಕೆ ಕೇಂದ್ರ ಸಚಿವ ಹೆಚ್​ಡಿಕೆ ಭೇಟಿ (ETV Bharat)

ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL)ನ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳು ಮತ್ತು ಕಾರ್ಮಿಕರ ಜತೆ ಸಂವಾದ ನಡೆಸಿ ಸಚಿವರು ಮಾತನಾಡಿದರು.
ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿಗಳು ದೊಡ್ಡ ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಅವರನ್ನು ನಾವು ನಿಕಟವಾಗಿ ಹಿಂಬಾಲಿಸುತ್ತಿದ್ದೇವೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ನಿರಂತರವಾಗಿ ಚರ್ಚೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಬಿಹೆಚ್​ಇಎಲ್ ವಿದ್ಯುನ್ಮಾನ ಘಟಕ (ETV Bharat)

ಬಿಹೆಚ್​ಇಎಲ್​ಗೆ ಮತ್ತಷ್ಟು ಶಕ್ತಿ: ಪ್ರಧಾನಿಯವರ ಸ್ಪಷ್ಟ ಮತ್ತು ನಿಖರ ಗುರಿಗಳನ್ನು ಇಟ್ಟುಕೊಂಡಿದ್ದಾರೆ. ಭಾರತವನ್ನು ಮೂರನೇ ಬೃಹತ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದು ಹಾಗೂ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಲು ಕೈಗಾರಿಕಾ ಉತ್ಪನ್ನವನ್ನು ಹೆಚ್ಚಳ ಮಾಡುವುದು ಅವರ ಉದ್ದೇಶವಾಗಿದೆ. ಅದಕ್ಕಾಗಿ ಅವರ ಕನಸಿನ ಮೆಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳು ಹೆಚ್ಚು ಪರಿಣಾಮಕಾರಿ ಆಗಿವೆ. ಇದೇ ಪರಿಕಲ್ಪನೆ ಅಡಿಯಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಯನ್ನು ಮತ್ತಷ್ಟು ಸಶಕ್ತಗೊಳಿಸಲಾಗುವುದು ಎಂದರು.

ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ ಸಚಿವ (ETV Bharat)

ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಬಿಹೆಚ್​ಇಎಲ್ ಉತ್ತಮವಾಗಿ ನಡೆಯುತ್ತಿದೆ. ಮೈಸೂರು ಅರಸರು, ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಹಿನ್ನೆಲೆಯಲ್ಲಿ ಇದು ಸ್ಥಾಪನೆಯಾಯಿತು. ಕೈಗಾರಿಕೆ ಕ್ಷೇತ್ರದಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ಕೊಟ್ಟಿದೆ. ದೇಶದಲ್ಲಿ ಸಾರ್ವಜನಿಕ ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿವೆ. ಇಂಥ ಸವಾಲಿನ ನಡುವೆಯೂ ಬಿಹೆಚ್​ಇಎಲ್ ಲಾಭದಾಯಕವಾಗಿ ಮುನ್ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಹೆಚ್​ಇಎಲ್​ ಕಂಪನಿಗೆ ದೊಡ್ಡ ಪ್ರಮಾಣದ ಬೇಡಿಕೆಗಳಿಗೆ ಬರುತ್ತಿವೆ. ಆದರೆ ಲಾಭ ಅಷ್ಟು ತೃಪ್ತಿದಾಯಕವಾಗಿ ಇಲ್ಲ ಎಂದ ಸಚಿವರು, ನೀವು ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ನಷ್ಟಕ್ಕೆ ಸಿಲುಕದ ಹಾಗೆ ನೋಡಿಕೊಳ್ಳುವ ಹೊಣೆ ಅಧಿಕಾರಿಗಳು, ಕಾರ್ಮಿಕರ ಮೇಲೆಯೇ ಇದೆ ಎಂದು ಹೇಳಿದರು.

ನವದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಈಗಾಗಲೇ ಕಂಪನಿಯ ಆಗುಹೋಗುಗಳ ಬಗ್ಗೆ ಹಲವಾರು ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಈ ಕಂಪನಿ ಉತ್ತಮವಾಗಿ ನಡೆಯುತ್ತಿದೆ. ಒಳ್ಳೆಯ ಆಡಳಿತ, ಉತ್ತಮ ಕಾರ್ಮಿಕ ಶಕ್ತಿ, ತಾಂತ್ರಿಕ ಕುಶಲತೆಯಿಂದ ಉತ್ತಮ ಸ್ಥಿತಿಯಲ್ಲಿ ಇದೆ. ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಇದು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರು ಘಟಕದ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು. ಕಾರ್ಖಾನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾರ್ಮಿಕರ ಜತೆ ಸಂವಾದ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿದರು. ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಶ್ಯಾಂ ಬಾಬು ಸೇರಿದಂತೆ ಕಂಪನಿಯ ಹಿರಿಯ ಅಧಿಕಾರಿಗಳು ಈ ವೇಳೆ ಇದ್ದರು.

ಇದನ್ನೂ ಓದಿ:ಪ್ರಯಾಣಿಕ ಸ್ನೇಹಿಯಾಗುವತ್ತ ಮೈಸೂರು ರೈಲ್ವೆ; ಕ್ಯೂಆರ್​ ಕೋಡ್​ ಆಧಾರಿತ ಟಿಕೆಟ್​ ವ್ಯವಸ್ಥೆ ಜಾರಿ - QR code in mysore Railway

Last Updated : Aug 27, 2024, 7:21 PM IST

ABOUT THE AUTHOR

...view details