ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನತಾ ದರ್ಶನ - Janata Darshan - JANATA DARSHAN

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹೆಚ್​.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಇಂದು ಜನತಾ ರ್ದಶನದ ಮೂಲಕ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (ETV Bharat)

By ETV Bharat Karnataka Team

Published : Jul 5, 2024, 7:17 AM IST

ಮಂಡ್ಯ:ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಜನರು ಕುಂದು ಕೊರತೆ ಆಲಿಸಲು ಇಂದು ಬೆಳಗ್ಗೆ 10 ಗಂಟೆಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಜನತಾ ದರ್ಶನ ಆಯೋಜಿಸಿದ್ದಾರೆ.

ಹೆಚ್.ಡಿ. ದೇವೇಗೌಡ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಜನತಾ ದರ್ಶನ ಆರಂಭಿಸಿ ಜಿಲ್ಲೆಗಳಿಗೇ ಸರ್ಕಾರವನ್ನು ಕೊಂಡೊಯ್ದಿದ್ದು ಇತಿಹಾಸ. 2006ರಲ್ಲಿ ನಾನು ಮೊದಲ ಬಾರಿಗೆ ಸಿಎಂ ಆದಾಗ ಜನತಾ ದರ್ಶನ, ಗ್ರಾಮ ವಾಸ್ತವ್ಯದ ಮೂಲಕ ಸರ್ಕಾರವನ್ನು ಗ್ರಾಮ ಗ್ರಾಮಕ್ಕೂ ತೆಗೆದುಕೊಂಡು ಹೋದೆ. ನಂತರ ಅಧಿಕಾರ ಇರಲಿ, ಇಲ್ಲದಿರಲಿ ಎಲ್ಲಾ ಸಂದರ್ಭದಲ್ಲಿಯೂ ಜನತಾ ಪ್ರಭುಗಳ ದರ್ಶನವನ್ನು ನಾನು ತಪ್ಪಿಸಿಲ್ಲ. ಅದು ನನ್ನ ಪಾಲಿಗೆ ನಿತ್ಯ ಕಾಯಕ. ನಾಡಿನ ಜನರ, ಮಂಡ್ಯ ಮಹಾಜನತೆಯ ಆಶೀರ್ವಾದ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಪ್ರೀತಿಯಿಂದ ಕೇಂದ್ರ ಸಚಿವನಾಗಿರುವೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮಂಡ್ಯದಲ್ಲಿ ಜನತಾ ದರ್ಶನ ಹಮ್ಮಿಕೊಂಡಿದ್ದೇನೆ. ನಿಮ್ಮ ಸಮಸ್ಯೆ, ಕುಂದುಕೊರತೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲರೂ ಬನ್ನಿ ಎಂದು ಹೆಚ್​.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಪುಟ್ಟರಾಜು ಪರಿಶೀಲನೆ:

ಜನತಾ ದರ್ಶನ ನಡೆಯಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಗುರುವಾರ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮಂಡ್ಯದಲ್ಲಿ ಜನತಾ ದರ್ಶನ ನಡೆಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ, ಬೆಳಗ್ಗೆ 10 ಗಂಟೆಗೆ ಅಂಬೇಡ್ಕ‌ರ್ ಭವನದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ. ಇ

ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾದ ಮೇಲೆ ಮಂಡ್ಯಕ್ಕೆ ಕೇಂದ್ರ ಸಚಿವರಾಗಿ ಬಂದಿದ್ದರು. ಬೆಳಗ್ಗೆ ಜನತಾ ದರ್ಶನ ಕಾರ್ಯಕ್ರಮ ಇದೆ. ಸಂಜೆಯವರೆಗೂ ಕಾರ್ಯಕ್ರಮ ಇರಲಿದೆ. ಜನಸಾಮಾನ್ಯರ ಜೊತೆ ಇದ್ದು ಸಮಸ್ಯೆ ಆಲಿಸಲಿದ್ದಾರೆ. ಕುಮಾರಣ್ಣ ಅವರಿಗೆ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ. ಜನರ ನಿರೀಕ್ಷೆಯನ್ನ ಈಡೇರಿಸುವ ಕೆಲಸ ಮಾಡ್ತಾರೆ. ದೇಶದ ಕೆಲಸದ ಜೊತೆಗೆ ಮಂಡ್ಯದ ಜನರ ಋಣ ತೀರಿಸುವ ಅವಕಾಶ ಅವರಿಗೆ ಲಭಿಸಿದೆ. ನೂರಕ್ಕೆ ನೂರರಷ್ಟು ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ಮಾಡುತ್ತಾರೆ ಎಂದು ಗುರುವಾರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಭದ್ರಾವತಿಯ VISL ಕಾರ್ಖಾನೆ ಪುನಶ್ಚೇತನದ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ - H D Kumaraswamy

ABOUT THE AUTHOR

...view details