ಕರ್ನಾಟಕ

karnataka

ETV Bharat / state

ಅ.23ರಂದೇ ಕಿತ್ತೂರು ರಾಣಿ ಚನ್ನಮ್ಮ ಅಂಚೆ ಚೀಟಿ ಬಿಡುಗಡೆ: ಸಚಿವ ಜೋಶಿ

ಕೇಂದ್ರ ಸರ್ಕಾರ ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚನ್ನಮ್ಮ ಅಂಚೆ ಚೀಟಿ ಬಿಡುಗಡೆಗೊಳಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

kittur-rani-channamma-stamp
ಕಿತ್ತೂರು ರಾಣಿ ಚನ್ನಮ್ಮ ಅಂಚೆ ಚೀಟಿ (ETV Bharat)

By ETV Bharat Karnataka Team

Published : 10 hours ago

ನವದೆಹಲಿ/ಹುಬ್ಬಳ್ಳಿ:ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23. ಈ ಐತಿಹಾಸಿಕ ವಿಜಯಕ್ಕೀಗ 200 ವರ್ಷವಾಗುತ್ತಿದ್ದು, ಇದರ ಸ್ಮರಣಾರ್ಥವಾಗಿ ಚನ್ನಮ್ಮಳ ಅಂಚೆ ಚೀಟಿ ಬಿಡುಗಡೆ ಮಾಡಲಾಗುತ್ತಿದೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,"ಕೇಂದ್ರ ಸರ್ಕಾರ ಅ.23ರಂದು ಕಿತ್ತೂರು ರಾಣಿ ಚನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಿದೆ. ಈ ಮೂಲಕ ರಾಣಿ ಚನ್ನಮ್ಮ ಮತ್ತು ಕನ್ನಡ ನಾಡಿಗೆ ಅಭೂತಪೂರ್ವ ಗೌರವ ಸಲ್ಲಿಸುತ್ತಿದೆ" ಎಂದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಅರವಿಂದ ಬೆಲ್ಲದ್, ಅಭಯ್ ಪಾಟೀಲ್, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಪ್ರಮುಖರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದಷ್ಟೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ:ಇದ್ದೂ ಇಲ್ಲದಂತಾದ ರಾಣಿ ಚೆನ್ನಮ್ಮ ಅಧ್ಯಯನ ಪೀಠ: ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ

ABOUT THE AUTHOR

...view details