ಬೆಳಗಾವಿ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮುಡಾಗೆ ಸಂಬಂಧಿಸಿದ ಸಾವಿರಾರು ಫೈಲ್ಸ್ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಅವರಿಗೆ ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆಗಳಿದ್ದರೆ ಆದಷ್ಟು ಬೇಗ ಬಿಡುಗಡೆಗೊಳಿಸಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಹಿರಂಗ ಸವಾಲು ಹಾಕಿದ್ದಾರೆ.
ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೈರತಿ ಸುರೇಶ್ ಬಗ್ಗೆ ನಾನು ಧ್ವನಿ ಎತ್ತಿದೆ. ಧ್ವನಿ ಎತ್ತಿದ ತಕ್ಷಣ ನನ್ನ ಬಗ್ಗೆ ಬೇರೆ ಬೇರೆ ಆರೋಪ ಮಾಡುತ್ತಿದ್ದಾರೆ. ಹಲವು ಸರ್ಕಾರಗಳು ಈ ರೀತಿ ಆರೋಪಿಸಿ ತನಿಖೆ ಮಾಡಿದರು. ಆದರೆ, ಶೋಭಾ ಕರಂದ್ಲಾಜೆ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡೋದೂ ಇಲ್ಲ. ನನ್ನ ವಿರುದ್ಧ ದಾಖಲೆ ಬಹಿರಂಗಕ್ಕೆ ಪೊನ್ನಣ್ಣ ಅವರನ್ನು ಸರ್ಕಾರ ನೇಮಕ ಮಾಡುತ್ತಿದ್ದು, ಪೊನ್ನಣ್ಣನಿಗೆ ವಿದ್ಯುತ್ ಇಲಾಖೆಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.