ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಶೋಭಾ ಕರಂದ್ಲಾಜೆ - Shobha Karandlaje - SHOBHA KARANDLAJE

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ (ETV Bharat)

By ETV Bharat Karnataka Team

Published : Aug 2, 2024, 7:15 PM IST

Updated : Aug 2, 2024, 7:31 PM IST

ಶೋಭಾ ಕರಂದ್ಲಾಜೆ (ETV Bharat)

ಮೈಸೂರು: ಮುಡಾ ಹಾಗೂ ವಾಲ್ಮೀಕಿ ಹಗರಣಗಳೆರಡರಲ್ಲೂ ಸಿದ್ದರಾಮಯ್ಯ ಅಪರಾಧಿಯಾಗಿದ್ದಾರೆ. ಹೀಗಾಗಿ ಅವರು ತಕ್ಷಣ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸಣ್ಣ ಮೀನು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​​ ತಿಮಿಂಗಿಲ ಎಂದು ದೂರಿದರು.

ರಾಜ್ಯಪಾಲರ ನೋಟಿಸ್​ಗೆ ಸಿಎಂ ಸಿದ್ದರಾಮಯ್ಯ ಹೆದರಿದ್ದಾರೆ. ಅದಕ್ಕಾಗಿ ನಿನ್ನೆ ಸಭೆ ಕರೆದು ಸಚಿವ ಸಂಪುಟದಲ್ಲಿ ರಾಜ್ಯಪಾಲರ ವಿರುದ್ಧ ನಿರ್ಣಯ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ರಾಜ್ಯಪಾಲರಿಗೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ಅಲ್ಲ. ಸಾರ್ವಜನಿಕ ವ್ಯಕ್ತಿ ದೂರು ನೀಡಿರುವುದು. ಅದರ ಅನ್ವಯ ರಾಜ್ಯಪಾಲರು ನೋಟಿಸ್​ ನೀಡಿದ್ದಾರೆ. ಇದಕ್ಕೆ ಉತ್ತರ ಕೊಡುವ ಬದಲು ಮುಖ್ಯಮಂತ್ರಿಗಳು ಹೆದರಿಸುತ್ತಿದ್ದಾರೆ ಎಂದು ಹೇಳಿದರು.

ಮುಡಾ ಪ್ರಕರಣದಲ್ಲಿ ಸತ್ಯ ಎಲ್ಲರಿಗೂ ಗೊತ್ತಿದೆ. 50:50 ಅನುಪಾತದ ನಿಯಮ ಹೊಸ ಬಡಾವಣೆಗಳಿಗೆ ಮಾತ್ರ, ಈ ನಿಯಮ ಹಳೆಯ ಪ್ರಕರಣಗಳಿಗೆ ಅನ್ವಯ ಆಗುವುದಿಲ್ಲ. ಸಿದ್ದರಾಮಯ್ಯನವರು ನಿಯಮ ಮೀರಿ ತಮ್ಮ ಮನೆಯವರಿಗೆ ನಿವೇಶನ ಪಡೆದಿದ್ದಾರೆ. ಎಲ್ಲಾ ಸಂದರ್ಭದಲ್ಲೂ ಸಾಂವಿಧಾನಿಕ ಹುದ್ದೆಯಲ್ಲಿದ್ದ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಅಪರಾಧಿಯಾಗಿದ್ದಾರೆ, ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ಹಗರಣದಲ್ಲಿ ಭ್ರಷ್ಟಾಚಾರ ಆಗಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಹಣ ತೆಲಂಗಾಣ ಚುನಾವಣೆಗೆ ಹೋಗಿದೆ. ತೆಲಂಗಾಣ ಚುನಾವಣೆಯಾ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ನೀಡಲಾಗಿತ್ತು. ರಾಜ್ಯದಲ್ಲಿನ ಬಡವರ ತೆರಿಗೆ ಹಣ ಲೂಟಿಯಾಗಲು ಸಿದ್ದರಾಮಯ್ಯ ನೇರ ಹೊಣೆ. ಅವರೇ ಹಣಕಾಸು ಸಚಿವರು, ಸಚಿವ ನಾಗೇಂದ್ರ ನೆಪ ಮಾತ್ರ. ನಾಗೇಂದ್ರ ಹಿಂದಿರುವ ಶಕ್ತಿ ಸಿದ್ದರಾಮಯ್ಯ ಎಂದು ಆರೋಪಿಸಿದರು.

ನಾಳೆ ನಡೆಯಲಿರುವ ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಲಿದ್ದೇನೆ. ಬಳಿಕ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಯಾವುದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಸಂಸದ ಶೆಟ್ಟರ್ - Jagadish Shettar

Last Updated : Aug 2, 2024, 7:31 PM IST

ABOUT THE AUTHOR

...view details