ದಾವಣಗೆರೆ :ಸರ್ಕಾರಿ ಆಸ್ತಿಗಳ ಕಾವಲಿಗೆ ತಂತ್ರಜ್ಞಾನ ಬಳಕೆ ಮಾಡಲು ಸರ್ಕಾರ ಮುಂದಾಗಿದೆ. ಲ್ಯಾಂಡ್ ಬೀಟ್ ಆ್ಯಪ್ಮೂಲಕ ಸರ್ವೇ ಮಾಡಿ ಜಿಯೋ ಫೆನ್ಸಿಂಗ್ ಮಾಡುವ ಮೂಲಕ ದತ್ತಾಂಶಗಳನ್ನು ಸಂಗ್ರಹಿಸಲಾಗುತ್ತಿದೆ. ಲ್ಯಾಂಡ್ ಬೀಟ್ ಆ್ಯಪ್ಕಾಂತ್ರಿಕಾರಿಯಾಗಿ ಕೆಲಸ ಮಾಡುತ್ತದೆಯೇ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ.ವಿ ಪ್ರಾಯೋಗಿಕವಾಗಿ ಸರ್ವೇ ನಡೆಸಿದ್ದಾರೆ.
ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಜನರಲ್ಲಿತ್ತು. ಅದರೆ ಇದಕ್ಕೆ ಕಡಿವಾಣ ಹಾಕಲು ಸರ್ಕಾರ ತಂತ್ರಜ್ಞಾನ ಬಳಕೆ ಮಾಡುತ್ತಿದೆ. ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ಆ್ಯಪ್ ವ್ಯವಸ್ಥೆ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳನ್ನು ಜೋಪಾನ ಮಾಡಲು ಈ ಲ್ಯಾಂಡ್ ಬೀಟ್ ಕಾವಲಾಗಿ ಕಾಯುತ್ತದೆ. ಯಾರೇ ಸರ್ಕಾರದ ಆಸ್ತಿಯನ್ನು ಕಬಳಿಸಿದರೆ ತಕ್ಷಣ ಈ ಲ್ಯಾಡ್ ಬೀಟ್ ಜಿಯೋ ಫೆನ್ಸಿಂಗ್ ತಿಳಿಸುತ್ತದೆ.