ಕರ್ನಾಟಕ

karnataka

ETV Bharat / state

ರೈಲ್ವೆ ಇಲಾಖೆಯ 60 ಸಾವಿರ ಹುದ್ದೆಗಳಿಗೆ ಕನ್ನಡದಲ್ಲಿಯೇ ಪರೀಕ್ಷೆಗೆ ಅವಕಾಶ: ವಿ ಸೋಮಣ್ಣ - RAILWAY EXAMINATION IN KANNADA

ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮಾಡಿ ಕೇಂದ್ರ ಸಚಿವ ಸೋಮಣ್ಣ ಮಾತನಾಡಿದರು.

v Somanna says  60 thousand posts of railway Examination is allowed in Kannada
ವಿ ಸೋಮಣ್ಣ (ಈಟಿವಿ ಭಾರತ್​​)

By ETV Bharat Karnataka Team

Published : Oct 29, 2024, 12:24 PM IST

ಮೈಸೂರು:ಭಾರತೀಯ ರೈಲ್ವೆ ಇಲಾಖೆ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ನಡೆಸಲಿದೆ. ಈ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.

ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ. ಇದರ ಜೊತೆಗೆ ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ ಎಂದರು.

ಜನ ಸಾಮಾನ್ಯರ ಪರವಾದ ಯೋಜನೆ ಜಾರಿಗೆ:ಕೇಂದ್ರ ಅವರು ಜನ್​ಧನ್​ ಸೇರಿದಂತೆ ಹಲವು ಸಾಮಾನ್ಯರ ಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುದಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೂಡ ಕೊಡುಗೆ ನೀಡಿದೆ ಎಂದು ತಿಳಿಸಿದರು.

ವಿಕಸಿತ ಭಾರತಕ್ಕೆ ಮೋದಿ ಅಡಿಪಾಯ:ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ಕಳೆದ 10 ವರ್ಷಗಳಲ್ಲಿ ಪ್ರಧಾನಿ ಅವರು, ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047 ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಅಜ್ಜಂಪೀರ್ ಖಾದ್ರಿ ಅವರನ್ನು ಕ್ಷೇತ್ರಕ್ಕೆ ಕಳುಹಿಸಿಕೊಡುವಂತೆ ಅಭಿಮಾನಿಗಳ ಒತ್ತಾಯ

ABOUT THE AUTHOR

...view details