ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ ಮಾಜಿ ಸಚಿವ ಬಿ.ನಾಗೇಂದ್ರರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯ, ವಾಲ್ಮೀಕಿ ನಿಗಮದ ಖಾತೆಯಿಂದ ವರ್ಗಾವಣೆಯಾಗಿದ್ದ ಸುಮಾರು 89.65 ಕೋಟಿ ಹಣವನ್ನು ಮದ್ಯ ಹಾಗೂ ದುಬಾರಿ ಬೆಲೆಯ ಕಾರು ಖರೀದಿಗೆ ಬಳಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ 89.65 ಕೋಟಿ ಅವ್ಯವಹಾರ ನಡೆದಿದೆ. ಈ ಸಂಬಂಧ ನಾಲ್ಕು ರಾಜ್ಯಗಳಲ್ಲಿ ಏಕಕಾಲದಲ್ಲಿ 23 ಕಡೆ ದಾಳಿ ಮಾಡಲಾಗಿದೆ. ಒಟ್ಟು 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ನಂತರ ಈ ಹಣವೂ ಹಲವು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗವಾಗಿ ನಗದಾಗಿ ಪರಿವರ್ತಿಸಲಾಗಿದೆ. ಈ ಸಂಬಂಧ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಯಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿವೆ.