ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಆದೇಶ ಮಂಗಳವಾರ(ಇಂದು) ಹೊರಬೀಳಲಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ತೀರ್ಪು ಕಾಯ್ದಿರಿಸಿದ್ದು, ಮಧ್ಯಾಹ್ನ 2.30ಕ್ಕೆ ಪ್ರಕಟಿಸಲಿದೆ.
ಈ ಪ್ರಕರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಿವಾದ ಎಂದು ಅದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸಬೇಕೇ? ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 35ಎ ಅಡಿ ಹೊರಡಿಸಿರುವ ಮಾಸ್ಟರ್ ಸುತ್ತೋಲೆಯ ಪ್ರಕಾರ ನಿರ್ದಿಷ್ಟ ಮೊತ್ತದ ಹಣಕಾಸು ಅವ್ಯವಹಾರವನ್ನು ಸಿಬಿಐ ತನಿಖೆ ನಡೆಸಬೇಕೇ ಎಂಬ ವಿಚಾರಗಳಿಗೆ ಉತ್ತರಿಸುವ ಮೂಲಕ ಅರ್ಜಿಯ ಊರ್ಜಿತತ್ವ ನಿರ್ಧರಿಸಲಾಗುವುದು ಎಂದು ನ್ಯಾಯಪೀಠ ಹೇಳಿತ್ತು.