ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಗುರುವಾರ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸ್ವತಂತ್ರ ಅಭ್ಯರ್ಥಿಯಾಗಿ ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಯಾವುದೇ ಅದ್ಧೂರಿ ಮೆರವಣಿಗೆ ಇಲ್ಲದೇ, ಸರಳವಾಗಿ ಆಟೋ ರಿಕ್ಷಾದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾರ್ಯಾಲಯಕ್ಕೆ ಆಗಮಿಸಿ, ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕವಾಗಿ ಕನ್ನಡಿಗರ ಬಗ್ಗೆ ಹೋರಾಟ ಮಾಡುವುದಕ್ಕೆ ಹಾಗೂ ಲೋಕಸಭೆಯಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಮಾತನಾಡಬೇಕಾಗಿದೆ. ಕಾವೇರಿ, ಮಹದಾಯಿ, ಕಳಸಾ-ಬಂಡೂರಿ ಸೇರಿದಂತೆ ಇತರೆ ಹಲವಾರು ಕರ್ನಾಟಕದ ಜಲ, ನೆಲದ ಸಮಸ್ಯೆಗಳ ಕುರಿತು ಹೋರಾಟ ಮಾಡಲು ವಾಟಾಳ್ ನಾಗರಾಜ್ ಒಬ್ಬರಿಗೆ ಮಾತ್ರ ಸಾಧ್ಯ. ಈವರೆಗೂ ಲೋಕಸಭೆಗೆ ಆಯ್ಕೆಯಾದ ವ್ಯಕ್ತಿಗಳು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ಪಾಲನೆ ಮಾಡಲಿಲ್ಲ ಎಂದು ದೂರಿದರು.