ಕರ್ನಾಟಕ

karnataka

ETV Bharat / state

ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಾಹಿತಿ ಬಾಳಾಸಾಹೇಬ ಲೋಕಾಪುರ
ಸಾಹಿತಿ ಬಾಳಾಸಾಹೇಬ ಲೋಕಾಪುರ (ETV Bharat)

By ETV Bharat Karnataka Team

Published : Oct 30, 2024, 9:11 PM IST

ಚಿಕ್ಕೋಡಿ(ಬೆಳಗಾವಿ): ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

ಬಾಳಾಸಾಹೇಬ ಲೋಕಾಪುರ 8ಕ್ಕೂ ಹೆಚ್ಚು ಕಥಾ ಸಂಕಲನಗಳು, 10 ಕಾದಂಬರಿಗಳು ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿದ್ದಾರೆ. 2016ರಿಂದ 2022ರವರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬಾಗಲಕೋಟೆಯ ಎಸ್‌.ಸಕ್ರಿ ಪದವಿಪೂರ್ವ ಕಾಲೇಜಿನಲ್ಲಿ ಭೂಗೋಳ ವಿಜ್ಞಾನ ವಿಷಯದ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ (ETV Bharat)

ಬಾಳಾಸಾಹೇಬ ಲೋಕಾಪುರ ಅವರು 'ಈಟಿವಿ ಭಾರತ'ದ ಜೊತೆ ಮಾತನಾಡಿ, "ನಾನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಂತೋಷವಾಗಿದೆ. ರಾಜ್ಯ ಸರ್ಕಾರ ಪಾರದರ್ಶಕವಾಗಿ ಸಾಧಕರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸದಿದ್ದರೂ ಸರ್ಕಾರ ನನ್ನ ಸೇವೆಯನ್ನು ಗುರುತಿಸಿದೆ. ಇದು ನನ್ನ ಸೌಭಾಗ್ಯ. ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡ ಜಾಗೃತಿ ಮೂಡಿಸುವುದು ಅತ್ಯವಶ್ಯಕ. ಬೇರೆ ಬೇರೆ ಉದ್ದೇಶಗಳಿಗಾಗಿ ಗಡಿ ವಿವಾದವನ್ನು ಸೃಷ್ಟಿಸಲಾಗುತ್ತಿದೆ. ಇದನ್ನು ಮನಸಿನಲ್ಲಿಟ್ಟುಕೊಂಡು ಕನ್ನಡದ ಅಸ್ಮಿತೆಯನ್ನು ಬೆಳೆಸಬೇಕಿದೆ" ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಿರಲಿಲ್ಲ, ಅದರೂ ಪ್ರಶಸ್ತಿ ಬಂದಿರುವುದು ಖುಷಿ ತಂದಿದೆ‌: ಅರುಣ್​ ಯೋಗಿರಾಜ್​

ABOUT THE AUTHOR

...view details