ಕರ್ನಾಟಕ

karnataka

ETV Bharat / state

ಶೃಂಗೇರಿ ಪೋಕ್ಸೋ ಪ್ರಕರಣ: ಅಪ್ರಾಪ್ತೆಯ ತಾಯಿ ಸೇರಿ ನಾಲ್ವರು ತಪ್ಪಿತಸ್ಥ ಎಂದು ತೀರ್ಪು, 49 ಮಂದಿ ಖುಲಾಸೆ - Sringere Pocso case court verdict

ಶೃಂಗೇರಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಬಾಲಕಿಯ ತಾಯಿ ಸೇರಿ ನಾಲ್ವರ ವಿರುದ್ಧ ದೋಷಾರೋಪ ಸಾಬೀತಾಗಿದೆ.

Etv Bharat
Etv Bharat

By ETV Bharat Karnataka Team

Published : Mar 7, 2024, 9:18 PM IST

ಚಿಕ್ಕಮಗಳೂರು: 2021ರಲ್ಲಿ ಬೆಚ್ಚಿ ಬೀಳಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಿಕ್ಕಮಗಳೂರಿನ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪೋಕ್ಸೋ ಪ್ರಕರಣದ ಒಟ್ಟು 53 ಆರೋಪಿಗಳಲ್ಲಿ 49 ಜನರನ್ನು ಖಲಾಸೆಗೊಳಿಸಿ, ನಾಲ್ವರು ತಪ್ಪಿತಸ್ಥರೆಂದು ಕೋರ್ಟ್ ಆದೇಶ ಹೊರಡಿಸಿದೆ.

ಅಪ್ರಾಪ್ತೆ ಬಾಲಕಿಯ ತಾಯಿ ಸೇರಿ ನಾಲ್ವರ ವಿರುದ್ಧ ದೋಷಾರೋಪ ಸಾಬೀತಾಗಿದ್ದು, ಮುಂದಿನ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟವಾಗುವ ಸಾಧ್ಯತೆ ಇದೆ. ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿತು.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ಶೃಂಗೇರಿಯಲ್ಲಿ 2021ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣ ಸಂಬಂಧ 53 ಜನರ ವಿರುದ್ಧ ದೂರು ದಾಖಲಾಗಿತ್ತು. ಅಂದಿನ ಎಎಸ್​​ಪಿ ಶೃತಿ ತನಿಖಾಧಿಕಾರಿಯಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಪ್ರಕರಣ ಸಂಬಂಧ 38 ವಿವಿಧ ರೀತಿಯ ಚಾರ್ಜ್​​ಶೀಟ್ ಸಲ್ಲಿಸಿದ್ದರು. ಕೋರ್ಟ್ ವಿಚಾರಣೆ ನಡೆಸಿ, 49 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಶೃಂಗೇರಿ ತಾಲೂಕಿನಲ್ಲಿ ನಡೆದಿದ್ದ ಈ ಪೋಕ್ಸೋ ಪ್ರಕರಣ 2021ರಲ್ಲಿ ಭಾರೀ ಸುದ್ದಿಯಾಗಿತ್ತು. ಪ್ರಕರಣದ ಎಲ್ಲ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. 49 ಜನರು ಆರೋಪ ಮುಕ್ತರಾಗಿದ್ದು, ನಾಲ್ವರಿಗೆ ಶಿಕ್ಷೆ ಪ್ರಮಾಣ ಘೋಷಣೆ ಕಾಯ್ದಿರಿಸಲಾಗಿದೆ.

ಇದನ್ನೂ ಓದಿ: ಅಪ್ರಾಪ್ತ ಪತ್ನಿ, ಮಗುವಿಗೆ ಆರೋಪಿಯೇ ಜೀವನಾಧಾರ: ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ABOUT THE AUTHOR

...view details