ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ಸರ್ಕಾರದಿಂದ ನೇಮಕಗೊಂಡಿದ್ದ ವಿಜಯ್‌ಕುಮಾರ್ ಹೆಚ್.ಬಿ. ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಇವರು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು. 2014ರ ಕೆಎಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದು, ಕುವೆಂಪು ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಯೂ ಹೌದು.
ಮೂಲತಃ ಚನ್ನಗಿರಿ ತಾಲೂಕಿನವರಾದ ವಿಜಯ್‌ಕುಮಾರ್ 2018ರ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.