ಕರ್ನಾಟಕ

karnataka

ETV Bharat / state

ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಮುಖ್ಯ ಪರೀಕ್ಷೆ; ನಾಳೆ ಕನ್ನಡ ಕಡ್ಡಾಯ ಪರೀಕ್ಷೆ

ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : 4 hours ago

ಬೆಂಗಳೂರು: ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅ.27ರಂದು ಮುಖ್ಯ ಪರೀಕ್ಷೆ ನಡೆಸಲಿದೆ.

ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ ಅ.26ರಂದು (ನಾಳೆ) ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ.

ಮುಖ್ಯ ಪರೀಕ್ಷೆ ಅ.27ರಂದು ನಡೆಯಲಿದ್ದು, 4.8 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ. 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಅಭ್ಯರ್ಥಿಗಳಿಗೆ ಸೂಚನೆ: ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಒಎಂಆರ್ ಶೀಟ್​ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು 9 ಸಾವಿರ ಮಂದಿ ತಪ್ಪು ಮಾಡಿದ್ದು ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಒಎಂಆರ್ ಶೀಟ್ ನೀಡಲಾಗಿದ್ದು, ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪುಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.‌ ಮಾದರಿ ಒಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಬೇಡ ಎಂದೂ‌ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ಇಂಜಿನಿಯರಿಂಗ್​ ಸೇವಾ ಪರೀಕ್ಷೆ ಮುಂದೂಡಿದ ಯುಪಿಎಸ್​ಸಿ: ಕಾರಣ ಇದು!

ABOUT THE AUTHOR

...view details