ಕರ್ನಾಟಕ

karnataka

ETV Bharat / state

ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಅಂಕಗಳ ತಾತ್ಕಾಲಿಕ ಪಟ್ಟಿ ಪ್ರಕಟ - VILLAGE ADMINISTRATIVE OFFICER EXAM

ಅಕ್ಟೋಬರ್ 27ರಂದು ನಡೆದ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯ ಅಂಕಗಳ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ.

VILLAGE ADMINISTRATIVE OFFICER EXAM
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)

By ETV Bharat Karnataka Team

Published : Nov 27, 2024, 7:52 PM IST

ಬೆಂಗಳೂರು:ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆದಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬುಧವಾರ ಪ್ರಕಟಿಸಿದೆ.

''ಫಲಿತಾಂಶದ ಜೊತೆಗೆ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ. ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದರೆ ನವೆಂಬರ್ 28ರಂದು ಸಂಜೆ 4 ಗಂಟೆಯ ಒಳಗೆ ವೆಬ್​ಸೈಟ್​​ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಸಲ್ಲಿಸಬಹುದು'' ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆಗಳ ಕೀ ಉತ್ತರಗಳ ಬಿಡುಗಡೆ

ದಿನಾಂಕ ವಿಸ್ತರಣೆ:ಬಿ.ಎಸ್.ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್​​ಗಳಿಗೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ನವೆಂಬರ್ 28ರ ವರೆಗೆ ದಿನಾಂಕ ವಿಸ್ತರಿಸಲಾಗಿದೆ. ನವೆಂಬರ್ 29 ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ವಿವರಿಸಿದ್ದಾರೆ.

ಇದನ್ನೂ ಓದಿ:ಪಿಜಿ ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ABOUT THE AUTHOR

...view details