ಮಂಡ್ಯ - ಕುಮಾರಸ್ವಾಮಿ - ಮುನ್ನಡೆ
ಬೆಳಗಾವಿ - ಜಗದೀಶ್ ಶೆಟ್ಟರ್ - ಮುನ್ನಡೆ
ಹಾವೇರಿ - ಬಸವರಾಜ ಬೊಮ್ಮಾಯಿ - ಮುನ್ನಡೆ
ಧಾರವಾಡ - ಪ್ರಹ್ಲಾದ್ ಜೋಶಿ - ಮುನ್ನಡೆ
ಬೀದರ್ -ಭಗವಂತ್ ಖೂಬಾ - ಹಿನ್ನಡೆ
ಬೆಂಗಳೂರು ಉತ್ತರ - ಬಿಜೆಪಿಯ ಶೋಭಾ ಕರಂದ್ಲಾಜೆ - ಮುನ್ನಡೆ
ಬೆಂಗಳೂರು: ರಾಜ್ಯದ 28 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದೆ. ಹೆಚ್ಚು ಸ್ಥಾನ ಗೆಲ್ಲಲೇಬೇಕೆಂಬ ಪೈಪೋಟಿ ಆಡಳಿತ-ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಮೂವರು ಮಾಜಿ ಮುಖ್ಯಮಂತ್ರಿಗಳು ಅಖಾಡಕ್ಕಿಳಿದಿದ್ದಾರೆ. ಮಂಡ್ಯದಿಂದ ಎನ್ಡಿಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹಾವೇರಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ, ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ: ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಈ ಹೆಚ್ಡಿಕೆಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ನ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಸ್ಪರ್ಧೆ ಮಾಡಿದ್ದಾರೆ. ಪ್ರಸ್ತುತ ಸ್ಟಾರ್ ಚಂದ್ರು ಹಿನ್ನಡೆಯಲ್ಲಿದ್ದಾರೆ. ಈ ಹಿಂದೆಯೂ 2013ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆ ಆಗಿ ಒಂದು ಬಾರಿ ಸಂಸತ್ ಮೆಟ್ಟಿಲೇರಿದ್ದ ಕುಮಾರಸ್ವಾಮಿ ಈಗ ಮತ್ತೆ ಕಣದಲ್ಲಿದ್ದಾರೆ.
ಜಗದೀಶ್ ಶೆಟ್ಟರ್:ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪರ್ಧಿಸಿದ್ದು, ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಶೆಟ್ಟರ್ ಪರ ಮೋದಿ ಸೇರಿ ಅನೇಕ ಬಿಜೆಪಿ ಅನೇಕ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದರು.
ಬಸವರಾಜ ಬೊಮ್ಮಾಯಿ:ಹಾವೇರಿ -ಗದಗ ಕ್ಷೇತ್ರದಲ್ಲಿ ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ನಆನಂದಸ್ವಾಮಿ ಗಡ್ಡದೇವರಮಠ ನಡುವೆ ತೀವ್ರ ಪೈಪೋಟಿ ಇದೆ. ಶಿಗ್ಗಾವಿ-ಸವಣೂರು ಕ್ಷೇತ್ರದ ಹಾಲಿ ಶಾಸಕರೂ ಆಗಿರುವ ಬೊಮ್ಮಾಯಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿಯ ಹಾಲಿ ಸಂಸದ ಶಿವಕುಮಾರ್ ಉದಾಸಿ ಈ ಬಾರಿ ಸ್ಪರ್ಧೆಗೆ ಹಿಂದೇಟು ಹಾಕಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದರು. ಆದರೆ, ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿತ್ತು.
ಪ್ರಹ್ಲಾದ್ ಜೋಶಿ:ಧಾರವಾಡ ಕ್ಷೇತ್ರದಲ್ಲಿಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತೆ ಕಣದಲ್ಲಿದ್ದು, ಕಾಂಗ್ರೆಸ್ನ ವಿನೋದ್ ಅಸೂಟಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಈಗಾಗಲೇ ಸತತವಾಗಿ ನಾಲ್ಕು ಬಾರಿ ಗೆದ್ದಿರುವ ಜೋಶಿ ಐದನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಮತ್ತೊಂದೆಡೆ, ಧಾರವಾಡದಲ್ಲಿ ಗೆಲುವಿಗಾಗಿ ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ಪಟ್ಟಿತ್ತು.
ಶೋಭಾ ಕರಂದ್ಲಾಜೆ:ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಬಾರಿ ಸ್ಪರ್ಧೆ ಮಾಡಿದ್ದಾರೆ. ಚಿಕ್ಕಮಗಳೂರು ಉಡುಪಿ ಕ್ಷೇತ್ರದ ಹಾಲಿ ಸಂಸದೆಯಾದ ಕರಂದ್ಲಾಜೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬಂದಿದ್ದಾರೆ. ಇಲ್ಲಿ ಕಾಂಗ್ರೆಸ್ನ ರಾಜೀವ್ಗೌಡ ಅವರನ್ನು ಎದುರಿಸುತ್ತಿದ್ದಾರೆ. ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಭಗವಂತ ಖೂಬಾ:ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಭಾವಿ ನಾಯಕ ಹಾಗೂ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ವಿರುದ್ಧ ಕೇಂದ್ರ ಸಚಿವ ಭಗವಂತ ಖೂಬಾ ಅಖಾಡದಲ್ಲಿದ್ದಾರೆ. ಮೂರನೇ ಗೆಲುವಿನ ನಿರೀಕ್ಷೆಯಲ್ಲಿದ್ದ ಭಗವಂತ ಖೂಬಾ ಹಿನ್ನಡೆ ಅನುಭವಿಸಿದ್ದಾರೆ.
ಇದನ್ನು ಓದಿ:ಮತ ಎಣಿಕೆಗೆ ಕ್ಷಣಗಣನೆ: ರಾಜ್ಯದ 29 ಕೇಂದ್ರಗಳಲ್ಲಿ ಸಕಲ ಸಿದ್ಧತೆ, 13 ಸಾವಿರ ಸಿಬ್ಬಂದಿ ನೇಮಕ - Lok Sabha Election Results 2024