ಕರ್ನಾಟಕ

karnataka

ETV Bharat / state

ಸಮುದ್ರ ಪೂಜೆ ಮಾಡಿ ನಾಮಪತ್ರ ಸಲ್ಲಿಕೆಗೆ ಮುಂದಾದ ವಿಶ್ವೇಶ್ವರ ಹೆಗಡೆ ಕಾಗೇರಿ - Vishweshwara Hegde Kageri - VISHWESHWARA HEGDE KAGERI

ಇಂದು ಬೆಳಗ್ಗೆ ಮಹಾಗಣಪತಿ ಹಾಗೂ ಮಾಲಾದೇವಿ ದೇವಸ್ಥಾನದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಕುಟುಂಬಸ್ಥರು ಹಾಗೂ ಬಿಜೆಪಿ ನಾಯಕರೊಂದಿಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲು ತೆರಳಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಸಮುದ್ರ ಪೂಜೆ
ವಿಶ್ವೇಶ್ವರ ಹೆಗಡೆ ಕಾಗೇರಿ ಸಮುದ್ರ ಪೂಜೆ

By ETV Bharat Karnataka Team

Published : Apr 12, 2024, 1:35 PM IST

Updated : Apr 12, 2024, 2:31 PM IST

ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ:ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಹಾಗಣಪತಿ ಹಾಗೂ ಮಾಲಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಸಮುದ್ರ ಪೂಜೆ ನೆರವೇರಿಸುವ ಮೂಲಕ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಸಮುದ್ರ ಪೂಜೆ

ಬೆಳಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕುಟುಂಬಸ್ಥರು ಹಾಗೂ ಬಿಜೆಪಿ ನಾಯಕರೊಂದಿಗೆ ನಗರದ ಮಹಾಗಣಪತಿ ದೇವಸ್ಥಾನ ಹಾಗೂ ಮಾಲಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರವೀಂದ್ರನಾಥ ಟ್ಯಾಗೋರ್​ ಕಡಲತೀರಕ್ಕೆ ತೆರಳಿ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ, ಬಿಜೆಪಿ ಶಾಸಕರಾದ ರೂಪಾಲಿ ನಾಯ್ಕ, ಅರವಿಂದ ಬೆಲ್ಲದ, ಸುನೀಲ್​ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್ಎಸ್ ಹೆಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ: ವಿಜಯೇಂದ್ರ - B Y Vijayendra

Last Updated : Apr 12, 2024, 2:31 PM IST

ABOUT THE AUTHOR

...view details