ಧಾರವಾಡ: ರೈತರ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದನ್ನು ತಹಶೀಲ್ದಾರ್ ತೆರವು ಮಾಡಿದ್ದು, ಉಪ್ಪಿನ ಬೆಟಗೇರಿ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ರೈತ ಕುಟುಂಬಗಳ ಪಹಣಿ ಪತ್ರದ ಕಾಲಂ ನಂಬರ್ 11ರಲ್ಲಿ 'ವಕ್ಫ್ ಆಸ್ತಿಗೆ ಒಳಪಟ್ಟಿದೆ' ಎಂದು ನಮೂದಾಗಿತ್ತು. ಪಹಣಿಯಲ್ಲಿನ ವಕ್ಫ್ ಆಸ್ತಿ ಎಂಬ ಪದ ತೆಗೆಯಬೇಕು ಎಂದು ಆಗ್ರಹಿಸಿ ರೈತರು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ದೊಡ್ಡಮಟ್ಟದ ಹೋರಾಟ ನಡೆಸಿದ್ದರು. ಇದಾದ ನಂತರ, ತಹಶೀಲ್ದಾರ್ ವಕ್ಫ್ ಹಾಗೂ ರೈತರೊಂದಿಗೆ ಸಭೆ ನಡೆಸಿ ಎನ್ಒಸಿ ಕೊಡಿಸಿದ್ದರು.