ಕರ್ನಾಟಕ

karnataka

ETV Bharat / state

ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು ; ನದಿ ಕಡೆ ತೆರಳದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ - KARNATAKA RAIN UPDATE

ಕೃಷ್ಣಾ ನದಿಗೆ ನಾರಾಯಣಪುರ ಜಲಾಶಯದಿಂದ ನೀರು ಹರಿಬಿಡಲಾಗಿದ್ದು, ನದಿ ಕಡೆಗೆ ತೆರಳದಂತೆ ಜಿಲ್ಲಾಡಳಿತದಿಂದ ಜಾಗೃತಿ ಮೂಡಿಸಲಾಗುತ್ತಿದೆ.

water-released-from-narayanpur-dam-to-krishna-river
ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು (ETV Bharat)

By ETV Bharat Karnataka Team

Published : Jul 17, 2024, 7:37 PM IST

ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು (ETV Bharat)

ರಾಯಚೂರು : ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಬಿಡಲಾಗಿದ್ದು, ನದಿ ತೀರದ ಗ್ರಾಮಗಳಿಗೆ, ನದಿಯ ಕಡೆ ಗ್ರಾಮಸ್ಥರು ಹೋಗದಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಕೃಷ್ಣಾನದಿಯ ಮೇಲ್ಭಾಗದಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜಲಾಶಯಕ್ಕೆ ಸಾವಿರಾರು ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಬುಧವಾರ ಸಂಜೆ 6 ಗಂಟೆಯಿಂದ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದ 16 ಗೇಟ್​ಗಳ ಮೂಲಕ 60 ಸಾವಿರದ 680 ಕ್ಯೂಸೆಕ್​ ಹೊರಹರಿವು ಇದ್ದು, ಈ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

ಹೀಗಾಗಿ ನದಿ ತೀರದಲ್ಲಿ ಇರುವ ಗ್ರಾಮಗಳ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಧಿಕಾರಿ ನಿತೀಶ್. ಕೆ ಆದೇಶದ ಮೇರೆಗೆ ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ನಾರಾಯಣಪುರ ಡ್ಯಾಂನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡರೆ ಮತ್ತಷ್ಟು ನೀರನ್ನು ಬಿಡುವ ಸಾಧ್ಯತೆಯಿದೆ.

ಇದನ್ನೂ ಓದಿ :ಭರ್ತಿಯಾದ ಅಂಜನಾಪುರ ಜಲಾಶಯಕ್ಕೆ ಬಿ.ವೈ. ವಿಜಯೇಂದ್ರ, ರಾಘವೇಂದ್ರರಿಂದ ಬಾಗಿನ ಅರ್ಪಣೆ - Anjanapura Reservoir

ABOUT THE AUTHOR

...view details