ಹುಬ್ಬಳ್ಳಿ:ನಗರದಲ್ಲಿ ವಿದ್ಯಾರ್ಥಿನಿಯ ಹತ್ಯೆ ನಡೆದಿರುವುದುಬಹಳ ದುರ್ದೈವದ ಸಂಗತಿ. ನಾವು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದೇವೆ. ಶೀಘ್ರ ತನಿಖೆ ಆಗಬೇಕು, ಹೀನ ಕೆಲಸ ಮಾಡಿದ ಹಂತಕನಿಗೆ ಶಿಕ್ಷೆ ಆಗಬೇಕು. ನೇಹಾ ನಮ್ಮ ಮಗಳು ಎಂದು ಭಾವಿಸಿದ್ದೇವೆ. ನಿರಂಜನಯ್ಯ ಮತ್ತು ನಾವು ಬಹಳ ವರ್ಷದಿಂದ ಸಂಪರ್ಕದಲ್ಲಿ ಇದ್ದೇವೆ. ಈ ಘಟನೆಯನ್ನು ನಾವು ಖಂಡಿಸುತ್ತೇವೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಮ್. ಹಿಂಡಸಗೇರಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಹಿಂದೆ ಯಾರಾದರೂ ಇದ್ದರೆ ಪತ್ತೆ ಹಚ್ಚಬೇಕು. ಫಾಸ್ಟ್‌ಟ್ರ್ಯಾಕ್ ಕೋರ್ಟ್ ರಚಿಸಿ, ಕೇಸ್ ಒಪ್ಪಿಸಬೇಕು. 90 ದಿನಗಳಲ್ಲಿ ಕೇಸ್ ಇತ್ಯರ್ಥವಾಗಬೇಕು. ಯಾವ ವಕೀಲರು ಸಹ ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನಾವು ಮನವಿ ಮಾಡಿದ್ದೇವೆ. ಇಂತಹ ಹೀನ ಕೆಲಸ ಮಾಡು ಎಂದು ಯಾವ ಧರ್ಮದಲ್ಲೂ ಹೇಳುವುದಿಲ್ಲ. ಯಾರು ಅನುಭವಿಸದಂತಹ ಶಿಕ್ಷೆಯನ್ನ ದೇವರು ಕೊಡಲಿ ಪ್ರಾರ್ಥನೆ ಮಾಡುತ್ತೇವೆ. ಪೊಲೀಸರು ನಡಸಿದ ಶಾಂತಿ ಸಭೆಯಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವ ಬಗ್ಗೆ ಮಾತನಾಡಲಾಗಿದೆ. ಮಕ್ಕಳಿಗೆ ಮಾರ್ಗದರ್ಶನ ಮಾಡಬೇಕಿದೆ ಎಂದರು.