ಹಾಸನ:''ಕೆಲವು ನಾಯಕರು ಬೇರೆ ಬೇರೆ ಕಾರಣಗಳಿಗೆ ದೂರ ಸರಿದಿದ್ದರು. ಆದ್ರೆ ಈಗ ಮತ್ತೆ ನರೇಂದ್ರ ಮೋದಿಯವರು ಪ್ರಧಾನಿ ಆಗಬೇಕೆಂದು ಮರಳಿ ಪಕ್ಷಕ್ಕೆ ಬರುತ್ತಿದ್ದು, ರಾಜ್ಯದಲ್ಲಿ 28ಕ್ಕೆ 28 ಸೀಟು ಗೆಲ್ಲುವ ನಿಟ್ಟಿನಲ್ಲಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ತಿಳಿಸಿದರು.
ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ''ಮೊನ್ನೆ ರಾಜ್ಯ ಕಾರ್ಯಕಾರಿಣಿ ಸಭೆ ಆಗಿದ್ದು, ಮುಂದಿನ ತಿಂಗಳು ಜಿಲ್ಲಾ ಕಾರ್ಯಕಾರಿಣಿ ಸಭೆಗಳು ನಡೆಯಲಿವೆ. ಲೋಕಸಭಾ ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ತೀರ್ಮಾನ ಆಗಲಿದೆ. ಎನ್ಡಿಎ ಅಭ್ಯರ್ಥಿ ಗೆಲ್ಲಬೇಕೆಂದು ದೇವೇಗೌಡ್ರು ಜಿಲ್ಲಾ ಪ್ರವಾಸ ಮಾಡಿದ್ದಾರೆ. ಜೆಡಿಎಸ್ನಿಂದ ಪ್ರಜ್ವಲ್ ಅಭ್ಯರ್ಥಿ ಆಗ್ತಾರೆ. ಆದ್ರೆ, ಪ್ರಜ್ವಲ್ ಎನ್ಡಿಎ ಅಭ್ಯರ್ಥಿ ಎಂದು ಹಿರಿಯರು ಎಲ್ಲಿಯೂ ಹೇಳಿಲ್ಲ. ಅಭ್ಯರ್ಥಿ ಯಾರೆಂದು ಸೀಟು ಹಂಚಿಕೆ ವೇಳೆಯಲ್ಲಿ ತೀರ್ಮಾನ ಆಗಲಿದೆ'' ಎಂದರು.