ಬೆಂಗಳೂರು :ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ನನಗೆ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಕೊಟ್ಟಿದ್ದಾರೆ. ನಾವು ಒಗ್ಗಟ್ಟಿನಿಂದ ಕೆಲಸ ಮಾಡಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ನೂತನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದ್ದಾರೆ.
ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರು ಲೋಕಸಭೆಯಲ್ಲಿ ಗೆದ್ದು ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಖಾಲಿಯಾಗಿತ್ತು. ಇದರ ಬಗ್ಗೆ ಪಕ್ಷದ ನಾಯಕರು ಚರ್ಚಿಸಿ ನನಗೆ ಈ ಸ್ಥಾನ ಕೊಟ್ಟಿದ್ದಾರೆ ಎಂದರು.
ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣದ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ. ಪ್ರಜ್ವಲ್ ಕೇಸ್ ಎಸ್ಐಟಿ ತನಿಖೆ ನಡೆಯುತ್ತಿದೆ. ನಮ್ಮ ವರಿಷ್ಠರು ತನಿಖೆ ಅಡ್ಡಿಪಡಿಸುವ ಕೆಲಸ ಮಾಡಲ್ಲ. ಕೋರ್ಟ್ನಲ್ಲಿರುವ ಕಾರಣ ಚರ್ಚೆಗೆ ಅವಕಾಶ ಇಲ್ಲ ಎಂದು ಹೇಳಿದರು. ಪೆನ್ ಡ್ರೈವ್ ಹಂಚಿಕೆ ಮಾಡಿದ್ದ ನವೀನ್ ಗೌಡಗೆ ಎಸ್ಐಟಿ ಪೊಲೀಸರು ಪತ್ರ ಬರೆದಿದ್ದಾರೆ. ಮುಡಾ, ವಾಲ್ಮೀಕಿ ನಿಗಮದ ಹಗರಣಗಳನ್ನ ಡಿಪೆಂಡ್ ಮಾಡೋಕೆ ಆಗಲ್ಲ ಎಂದರು.