ಚಾಮರಾಜನಗರ:ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿ, ಜನರನ್ನು ಆತಂಕಕ್ಕೀಡು ಮಾಡಿರುವ ಘಟನೆ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಮುಖ್ಯರಸ್ತೆ, ಬಂಗಲೆ ಪೋಡಿನ ನಡುವೆ ನೀಳದಂತದ ಕಾಡಾನೆಯೊಂದು ಓಡಾಡಿದೆ. ಅಲ್ಲಿನ ಜನರು ಹಾಗೂ ಭಕ್ತರನ್ನು ಪರದಾಡುವಂತೆ ಮಾಡಿದೆ.
Watch: ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಎಂಟ್ರಿ; ಗಜರಾಜನ ಕಂಡು ಬೆಚ್ಚಿಬಿದ್ದು ಪೇರಿಕಿತ್ತ ಜನ - WILD ELEPHANT ENTER ON THE ROAD - WILD ELEPHANT ENTER ON THE ROAD
ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಧಾವಿಸಿ, ಜನರನ್ನು ಭಯಭೀತರನ್ನಾಗಿಸಿದೆ.
ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ (ETV Bharat)
Published : Jun 13, 2024, 10:02 AM IST
|Updated : Jun 13, 2024, 10:54 AM IST
ಬೆಳ್ಳಂಬೆಳಗ್ಗೆಯೇ ಗಜರಾಜನ ದಾದಾಗಿರಿಗೆ ಜನರು ಅವಾಕ್ಕಾಗಿದ್ದಾರೆ. ಈ ವೇಳೆ ಎದುರಿಗೆ ಬಂದ ಕೆಎಸ್ಆರ್ಟಿಸಿ ಬಸ್, ಟಾಟಾ ಏಸ್ ಸೇರಿದಂತೆ ಇತರ ವಾಹನಗಳನ್ನು ಕಾಡಾನೆ ಹಿಮ್ಮೆಟ್ಟಿಸಿ ಓಡಿಸಿದೆ.
ಕಳೆದ ಎರಡು ತಿಂಗಳಿನಿಂದಲೂ ಪೋಡುಗಳತ್ತ ಈ ಆನೆ ಧಾವಿಸುತ್ತಿದೆ ಎಂದು ತಿಳಿದು ಬಂದಿದೆ. ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣಿಗಾಗಿ ಪೋಡುಗಳತ್ತ ಬರುತ್ತಿದೆ ಎನ್ನಲಾಗಿದೆ.
Last Updated : Jun 13, 2024, 10:54 AM IST