ಚಾಮರಾಜನಗರ:ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆಯೊಂದು ಸೀದ ಹೋಟೆಲ್ಗೆ ಎಂಟ್ರಿ ಕೊಟ್ಟಿದೆ. ಪ್ರಸಿದ್ಧ ಪ್ರವಾಸಿ ತಾಣ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಶನಿವಾರ ರಾತ್ರಿ ಕಾಡಾನೆ ಕಾಣಿಸಿಕೊಂಡಿದೆ.
ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರವಾಸೋದ್ಯಮ ಇಲಾಖೆಯು ನಡೆಸುತ್ತಿರುವ ಹೋಟೆಲ್ ಮಯೂರಕ್ಕೆ ಬಂದ ಕಾಡಾನೆಯೊಂದು ಆವರಣದಲ್ಲಿ ಓಡಾಡಿದ್ದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಆನೆ ಬಂದದ್ದನ್ನು ಗಮನಿಸಿದ ಸಿಬ್ಬಂದಿ ಶಬ್ಧ ಮಾಡಿ ಓಡಿಸಿ ಹೋಟೆಲ್ ಗೇಟ್ ಬಂದ್ ಮಾಡಿದ್ದಾರೆ. ಆನೆ ಓಡಾಟದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.