ಕರ್ನಾಟಕ

karnataka

ETV Bharat / state

ರಾಜಸ್ಥಾನದಲ್ಲಿ ನೀರಾವರಿ ಸಚಿವರ ಸಭೆ: ರಾಜ್ಯದ ಯಾವೆಲ್ಲ ವಿಚಾರಗಳ ಪ್ರಸ್ತಾಪ? ಡಿಕೆಶಿ ಪ್ರತಿಕ್ರಿಯೆ ಹೀಗಿದೆ - IRRIGATION MINISTERS MEETING

ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದು ಡಿಸಿಎಂ ಹಾಗೂ ರಾಜ್ಯದ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್​ ತಿಳಿಸಿದರು.

DCM DK Shivakumar
ಡಿಸಿಎಂ ಡಿ.ಕೆ.ಶಿವಕುಮಾರ್​ (ETV Bharat)

By ETV Bharat Karnataka Team

Published : Feb 18, 2025, 11:04 AM IST

ಬೆಂಗಳೂರು: "ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾತನಾಡಿದ ಅವರು, "ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದೆ. ಇಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರೊಂದಿಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ" ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ (ETV Bharat)

ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ" ಎಂದರು.

"ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ" ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, "ಇದೆಲ್ಲವೂ ಸುಳ್ಳು, ಸರ್ಕಾರಕ್ಕೆ ಸಂಪನ್ಮೂಲ ಕ್ರೋಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ಬರುತ್ತದೆ. ಆರ್ಥಿಕ ವರ್ಷಾಂತ್ಯದ ವೇಳೆಗೆ ಎಲ್ಲವೂ ಸರಿಯಾಗುತ್ತದೆ. ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಆರ್ಥಿಕವಾಗಿ ನಾವು ಬಲಿಷ್ಠವಾಗಿದ್ದೇವೆ. ಅನ್ನಭಾಗ್ಯದಲ್ಲಿ ಜನರಿಗೆ ತಲುಪಬೇಕಾದ ಅಕ್ಕಿ ತಲುಪುತ್ತಿದೆ. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳ ಹೊರತಾಗಿ, ಈ ವಿಚಾರದಲ್ಲಿ ಜನಸಾಮಾನ್ಯರಿಗೆ ಅಸಮಾಧಾನ ಇಲ್ಲ. ಜನರು ಈ ವಿಚಾರದಲ್ಲಿ ಸಂತೋಷವಾಗಿದ್ದಾರೆ. ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಎರಡು, ಮೂರು ತಿಂಗಳು ಹಣ ಬಾಕಿ ಇದ್ದು, ಈ ತಿಂಗಳು ಬಿಡುಗಡೆಯಾಗಲಿದೆ" ಎಂದು ತಿಳಿಸಿದರು.

ಇದನ್ನೂ ಓದಿ:ಹಿಂದೆ ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟ್​​ಗಾ : ಡಿ.ಕೆ.ಶಿವಕುಮಾರ್ ತಿರುಗೇಟು

ABOUT THE AUTHOR

...view details