ತುಮಕೂರು:ಸಾಮಾಜಿಕ ಜಾಲತಾಣದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಅಭಿಮಾನಿಗಳು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪರಮೇಶ್ವರ್‌ಗೆ ಮನವಿ ಸಲ್ಲಿಸಿದರು.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಕುರಿತು ಅವಹೇಳನಕಾರಿ ಹೇಳಿಕೆ: ಕಿಡಿಗೇಡಿಗಳ ವಿರುದ್ಧ ಕ್ರಮ- ಪರಮೇಶ್ವರ್ - G Parameshwar - G PARAMESHWAR
ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
Etv Bharat
Published : Apr 8, 2024, 6:57 PM IST
ಈ ಮನವಿಗೆ ಸ್ಪಂದಿಸಿದ ಸಚಿವ ಪರಮೇಶ್ವರ್, ನಟ ದಿ.ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.