ಕೋಲಾರ: ಇಬ್ಬರು ಮಕ್ಕಳನ್ನು ಕೊಂದು ಹಾಕಿದ ತಾಯಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ತಿಪ್ಪಮ್ಮ (30) ತನ್ನ ಮಕ್ಕಳ ಕತ್ತು ಹಿಸುಕಿ ಕೊಲೆಗೈದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಮೆಲ್ ನಗರ ಠಾಣೆಯ ಪೊಲೀಸರು, ಪತಿ ಮಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಎಂಟು ವರ್ಷಗಳ ಹಿಂದೆ ಇವರ ಮದುವೆಯಾಗಿತ್ತು. ದಂಪತಿಗೆ 7 ವರ್ಷದ ಮೌನಿಶ್ ಹಾಗೂ 4 ವರ್ಷದ ನಿತಿನ್ ಎಂಬಿಬ್ಬರು ಮಕ್ಕಳಿದ್ದರು. ಆಗಾಗ ಗಂಡ-ಹೆಂಡತಿ ನಡುವೆ ಗಲಾಟೆಯಾಗುತ್ತಿತ್ತು ಎಂಬ ಸ್ಥಳೀಯರ ಹೇಳಿಕೆ ಮೇರೆಗೆ ಗಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆಗೈದು ಗೃಹಿಣಿ ಆತ್ಮಹತ್ಯೆಗೆ ಶರಣು - BENGALURU MOTHER SUICIDE CASE