ಬೆಂಗಳೂರು:ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಂಧ್ರಹಳ್ಳಿಯಲ್ಲಿ ನಡೆದಿದೆ. ಮಾನಸ (25) ಸಾವನ್ನಪ್ಪಿದವರು. ಆತ್ಮಹತ್ಯೆಗೆ ಶರಣಾಗುವ ಮುನ್ನ ವಿಡಿಯೋ ಮಾಡಿಟ್ಟಿದ್ದಾರೆ.
6 ವರ್ಷದ ಹಿಂದೆ ದಿಲೀಪ್ ಜೊತೆಗೆ ಮಾನಸ ವಿವಾಹವಾಗಿತ್ತು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗುವಿದೆ. ಕಳೆದ ಒಂದೂವರೆ ವರ್ಷದಿಂದ ಆತ ಬೇರೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇದೇ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಪತಿ ದಿಲೀಪ್ ಆಗಗ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಮಾನಸ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.